×
Ad

ಗಂಭೀರ ಸ್ಥಿತಿಯಲ್ಲಿ ಮಾಜಿ ಸಚಿವ ಧನಂಜಯ ಕುಮಾರ್

Update: 2018-12-05 22:07 IST

ಮಂಗಳೂರು, ಡಿ. 5: ಬಿಜೆಪಿಯ ಮಾಜಿ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ವಿ. ಧನಂಜಯ ಕುಮಾರ್ ಇದೀಗ ಕೋಮಾ ಸ್ಥಿತಿ ತಲುಪಿದ್ದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೆಲ ವರ್ಷಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಧನಂಜಯ ಕುಮಾರ್ ಅವರನ್ನು ತಿಂಗಳುಗಳಿಂದ ನಗರದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇತ್ತೀಚೆಗೆ ಅವರ ಆರೋಗ್ಯ ತೀರಾ ಬಿಗಡಾಯಿಸಿದ್ದು, ಕೋಮ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದುಬಂದಿದೆ.

ಧನಂಜಯ ಕುಮಾರ್ ಕೇಂದ್ರದ ಮಾಜಿ ಹಣಕಾಸು ಖಾತೆ ರಾಜ್ಯ ಸಚಿವರಾಗಿದ್ದರು. ಇತ್ತೀಚೆಗಷ್ಟೇ ಅವರು ಬಿಜೆಪಿ ತೊರೆದಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News