ಮುಂದಿನ ಚುನಾವಣೆಗೂ ನಾನೇ ಅಭ್ಯರ್ಥಿ: ಸಂಸದ ಎಲ್.ಆರ್.ಶಿವರಾಮೇಗೌಡ
Update: 2018-12-05 22:51 IST
ಮಂಡ್ಯ, ಡಿ.5: ಮುಂಬರುವ ಲೋಕಸಭಾ ಚುನಾವಣೆಯಲ್ಲೂ ನಾನೇ ಅಭ್ಯರ್ಥಿಯಾಗುತ್ತೇನೆ ಎಂದು ಸಂಸದ ಎಲ್.ಆರ್.ಶಿವರಾಮೇಗೌಡ ಹೇಳಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ತಮ್ಮ ಕಚೇರಿಯನ್ನು ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗಬೆ ಮಾತನಾಡಿದ ಅವರು, ಟಿಕೆಟ್ ಬಗ್ಗೆ ಪಕ್ಷದ ವರಿಷ್ಠರಾದ ದೇವೇಗೌಡರು ನಿರ್ಧರಿಸಲಿದ್ದಾರೆ ಎಂದರು.
ಜಿಲ್ಲೆಯ ಜನರ ಸಮಸ್ಯೆ ನಿವಾರಣೆಗೆ ಪ್ರಮಾಣಿಕ ಪ್ರಯತ್ನ ಮಾಡಲಾಗುವುದು. ವಾರಕ್ಕೆ ಒಂದು ದಿನ ಜಿಲ್ಲೆಯ ಕಚೇರಿಯಲ್ಲಿ ಜನರ ಸಮಸ್ಯೆ ಆಲಿಸಲಾಗುವುದು ಎಂದು ಅವರು ತಿಳಿಸಿದರು.
ಕಚೇರಿಯಲ್ಲಿ ಒಬ್ಬರು ಅಧಿಕಾರಿ ಹಾಗೂ ಸಹಾಯಕರನ್ನು ನೇಮಿಸಲಾಗಿದೆ. ಜನರು ತಮ್ಮ ಸಮಸ್ಯೆಗಳ ಬಗ್ಗೆ ಕಚೇರಿಗೆ ಬಂದು ಮನವಿ ಸಲ್ಲಿಸಬಹುದು ಎಂದು ಅವರು ಹೇಳಿದರು.
ಶಾಸಕರಾದ ಎಂ.ಶ್ರೀನಿವಾಸ್, ರವೀಂದ್ರ ಶ್ರೀಕಂಠಯ್ಯ, ಎನ್.ಅಪ್ಪಾಜಿಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್ ಇತರ ಮುಖಂಡರು ಶಿವರಾಮೇಗೌಡರನ್ನು ಅಭಿನಂದಿಸಿದರು.