×
Ad

ಮಂಗಳೂರು: ಕೇಂದ್ರ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ

Update: 2018-12-05 22:53 IST

ಮಂಗಳೂರು, ಡಿ.5: ನಗರದ ಕೇಂದ್ರ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಲಕ್ಷಾಂತರ ರೂ. ಮೌಲ್ಯದ ಸೊತ್ತು ಬೆಂಕಿಗಾಹುತಿಯಾದ ಘಟನೆ ಬುಧವಾರ ರಾತ್ರಿ ನಡೆದಿದೆ.

ಕೇಂದ್ರ ಮಾರುಕಟ್ಟೆಯಲ್ಲಿನ ಎರಡು-ಮೂರು ಅಂಗಡಿಗಳಿಗೆ ಬೆಂಕಿ ಹೊತ್ತಿ ಉರಿದು ಭಾರೀ ಹೊಗೆ ಆವರಿಸಿತ್ತು. ಸುದ್ದಿ ತಿಳಿದ ತಕ್ಷಣ ನಗರದ ಪಾಂಡೇಶ್ವರ ಹಾಗೂ ಕದ್ರಿ ಠಾಣೆಯ ನಾಲ್ಕು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವಲ್ಲಿ ಕಾರ್ಯಾಚರಣೆ ನಡೆಸಿವೆ. ಘಟನೆಯಿಂದ ಸ್ಥಳದಲ್ಲಿ ಜನಜಂಗುಳಿ ಕೂಡಿದ್ದು, ನೂರಾರು ಮಂದಿ ಜಮಾವಣೆಗೊಂಡಿದ್ದಾರೆ.

ಪಾಂಡೇಶ್ವರದ ಆರ್‌ಎಫ್‌ಒ ತಿಪ್ಪೇಸ್ವಾಮಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News