ಪುದು ವಲಯ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಮುಹಮ್ಮದ್ ರಫೀಕ್ ನೇಮಕ
Update: 2018-12-05 23:27 IST
ಫರಂಗಿಪೇಟೆ, ಡಿ. 5: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಯ.ಟಿ ಖಾದರ್ ಅವರ ನಿರ್ದೇಶನದ ಮೇರೆಗೆ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು ಮತ್ತು ಡಿಸಿಸಿ ಪ್ರಧಾನ ಕಾರ್ಯದರ್ಶಿ ಎಫ್. ಉಮ್ಮರ್ ಫಾರೂಕ್ ಫರಂಗಿಪೇಟೆ ಸೂಚನೆಯಂತೆ ಮಡಿಪು ಬ್ಲಾಕ್ ಕಾಂಗ್ರೆಸ್ ಸಮತಿ ಅಧ್ಯಕ್ಷರಾದ ಪ್ರಶಾಂತ್ ಕಾಜವ ಅವರು ಪುದು ವಲಯ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಮುಹಮ್ಮದ್ ರಫೀಕ್ ಪೇರಿಮಾರ್ ಅವರನ್ನು ನೇಮಕ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಪುದು ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಮಾಜಿ ಉಪಾಧ್ಯಕ್ಷ, ಹಾಲಿ ಸದಸ್ಯರಾದ ಹಾಶೀರ್ ಪೇರಿಮಾರ್, ಗ್ರಾ.ಪಂ ಸದಸ್ಯ ರಿಯಾಝ್ ಕುಂಪನಮಜಲ್, ಯುವ ಕಾಂಗ್ರೆಸ್ ಕಾರ್ಯದರ್ಶಿ ಶೌಕತ್ ಆಲಿ ಮಾರಿಪಳ್ಳ, ಯುವ ಕಾಂಗ್ರೆಸ್ ಸದಸ್ಯ ಮಜೀದ್ ಪೇರಿಮಾರ್, ಲತೀಫ್ ಮಲಾರ್ ಹಾಗೂ ವಲಯ ಕಾಂಗ್ರೆಸ್ ಸದಸ್ಯ ಸಲಾಂ ಮಲ್ಲಿ ಉಪಸ್ಥಿತರಿದ್ದರು.