ಡಿ.8: ಬ್ಯಾರಿ ಸಾಹಿತ್ಯ ಕಮ್ಮಟ, ಬ್ಯಾರಿ ಪ್ರತಿಭಾ ಸ್ಪರ್ಧೆ
ಮಂಗಳೂರು, ಡಿ.6: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ವತಿಯಿಂದ ನೂರುಲ್ ಹುದಾ ಎಜುಕೇಶನ್ ಟ್ರಸ್ಟ್ (ರಿ) ಕಾಟಿಪಳ್ಳ ಇದರ ಸಹಕಾರದೊಂದಿಗೆ ಡಿ.8ರಂದು ಬೆಳಗ್ಗೆ 10ಕ್ಕೆ ಕಾಟಿಪಳ್ಳ ನೂರುಲ್ ಹುದಾ ವಿದ್ಯಾಸಂಸ್ಥೆಯ ಆವರಣದಲ್ಲಿ ಬ್ಯಾರಿ ಸಾಹಿತ್ಯ ಕಮ್ಮಟ ಮತ್ತು ಬ್ಯಾರಿ ಪ್ರತಿಭಾ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.
ಅಕಾಡಮಿಯ ಅಧ್ಯಕ್ಷ ಕರಂಬಾರ್ ಮುಹಮದ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ನೂರುಲ್ ಹುದಾ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಬದ್ರುದ್ದೀನ್ ಪಣಂಬೂರು ಅಧ್ಯಕ್ಷತೆ ವಹಿಸುವರು. ಪತ್ರಕರ್ತ ಹಂಝ ಮಲಾರ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ. ನೂರುಲ್ ಹುದಾ ಸಮೂಹ ವಿದ್ಯಾಸಂಸ್ಥೆಯ ಸಂಚಾಲಕ ಪಿ.ಎ. ಇಲ್ಯಾಸ್, ಹಸನಬ್ಬ ಮಾಸ್ಟರ್ ಪಿ.ಯು. ಕಾಲೇಜಿನ ಪ್ರಾಂಶುಪಾಲೆ ನಯನಾ ಶೇಣವ, ನೂರುಲ್ ಹುದಾ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಸುನಿತಾ ಪೈ, ನೂರುಲ್ ಹುದಾ ಕನ್ನಡ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಶಕುಂತಳಾ, ನೂರುಲ್ ಹುದಾ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಕೆ. ಮುಹಮ್ಮದ್ ಬಾವಾ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಮಾರೋಪ ಸಮಾರಂಭದಲ್ಲಿ ಕಾರ್ಪೊರೇಟರ್ ಹಾಜಿ ಪಿ. ಬಶೀರ್ ಅಹ್ಮದ್, ಪಣಂಬೂರು ಮುಸ್ಲಿಮ್ ಜಮಾತ್ ಅಧ್ಯಕ್ಷ ಮುಹಮ್ಮದ್ ತಮೀಮ್, ಕೆನರಾ ಯೂತ್ ಕೌನ್ಸಿಲ್ ಅಧ್ಯಕ್ಷ ಹಬೀಬ್, ಆಝಾದ್ ಯೂತ್ ಕೌನ್ಸಿಲ್ ಅಧ್ಯಕ್ಷ ಹಂಝ, ರಿಲಯನ್ಸ್ ಯೂತ್ ಅಸೋಸಿಯೇಶನ್ ಅಧ್ಯಕ್ಷ ಅಬ್ದುಲ್ ಲತೀಫ್, ಕಾಟಿಪಳ್ಳ ಯೂತ್ ಕ್ಲಬ್ ಅಧ್ಯಕ್ಷ ಹಸನಬ್ಬ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಿದ್ಯಾರ್ಥಿಗಳಿಗೆ ಬ್ಯಾರಿ ಭಾಷಣ, ಬ್ಯಾರಿ ಕವನ, ಬ್ಯಾರಿ ವಾಚನ ಮತ್ತು ಬ್ಯಾರಿ ಗಾಯನ ಸ್ಪರ್ಧೆಗಳು ನಡೆಯಲಿದೆ ಎಂದು ಅಕಾಡಮಿಯ ರಿಜಿಸ್ಟ್ರಾರ್ ಚಂದ್ರಹಾಸ ರೈ ಬಿ ತಿಳಿಸಿದ್ದಾರೆ.