×
Ad

ಸಾಸ್ತಾನ ಟೋಲ್ ಕೇಂದ್ರದ ವಿರುದ್ಧ ಮತ್ತೆ ಸಿಡಿದೆದ್ದ ಸ್ಥಳೀಯರು: ಧರಣಿ, ಕೋಟ ಬಂದ್

Update: 2018-12-07 11:14 IST

ಉಡುಪಿ, ಡಿ.7: ಹೆದ್ದಾರಿ ಅಸಮರ್ಪಕ ಹಾಗೂ ಅವೈಜ್ಞಾನಿಕ ಕಾಮಗಾರಿ ಮತ್ತು ಸ್ಥಳೀಯ ವಾಹನಗಳಿಂದ ಟೋಲ್ ಸಂಗ್ರಹಿಸುವುದನ್ನು ವಿರೋಧಿಸಿ ಶುಕ್ರವಾರ ಸಾಸ್ತಾನ ಟೋಲ್ ಕೇಂದ್ರದ ಬಳಿ ಧರಣಿ ಹಮ್ಮಿಕೊಳ್ಳಲಾಗಿದೆ.

ಸಾಸ್ತಾನ ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿಯ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಹಾಗೂ ಸಾರ್ವಜನಿಕರ ಬೆಂಬಲದೊಂದಿಗೆ ಹಮ್ಮಿಕೊಂಡಿರುವ ಧರಣಿಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಉಡುಪಿ ಶಾಸಕ ರಘುಪತಿ ಭಟ್, ಕಾಪು ಶಾಸಕ ಲಾಲಾಜಿ ಮೆಂಡನ್, ಜಿಪಂ ಅಧ್ಯಕ್ಷ ದಿನಕರ ಬಾಬು, ಇಂಟೆಕ್ ರಾಜ್ಯಾಧ್ಯಕ್ಷ ರಾಕೇಶ್ ಮಲ್ಲಿ, ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಕೇಮಾರು ಶ್ರೀ ಈಶ ವಿಠಲದಾಸ ಸ್ವಾಮೀಜಿ, ಬಾಳೆಕುದ್ರು ಮಠದ ಶ್ರೀನೃರಸಿಂಹಾಶ್ರಮ ಸ್ವಾಮೀಜಿ, ಸಾಸ್ತಾನ ಮಸೀದಿಯ ಮೌಲಾನ‌ ಇರ್ಫಾನ್ ಆಲಂ, ಸಾಸ್ತಾನ ಚರ್ಚ್ ನ ಧರ್ಮ ಗುರು ಫಾ.ಜಾನ್ ವಾಲ್ಟರ್ ಮೆಂಡೋನ್ಸಾ, ಜಿಲ್ಲಾ ಲಾರಿ ಮಾಲಕರ ಸಂಘದ ಅಧ್ಯಕ್ಷ ರಾಜೇಶ್ ಕಾವೇರಿ, ಜಿಲ್ಲಾ ಟ್ಯಾಕ್ಸಿಮೆನ್ ಅಸೋಸಿಯೇಶನ್ ಅಧ್ಯಕ್ಷ ರಮೇಶ್‌ ಕೋಟ್ಯಾನ್, ದೇವಿಪ್ರಸಾದ್ ಶೆಟ್ಟಿ, ವಿಶ್ವಾಸ್ ಅಮೀನ್, ಶಂಕರ್ ಕುಂದರ್, ಸಮಿತಿಯ ಅಧ್ಯಕ್ಷ ಪ್ರತಾಪ್ ಶೆಟ್ಟಿ ಮೊದಲಾದವರು ಭಾಗವಹಿಸಿದ್ದಾರೆ.

ಧರಣಿಯ ಹಿನ್ನೆಲೆಯಲ್ಲಿ ಕೋಟ, ಸಾಸ್ತಾನ ಪರಿಸರದ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಿ ಬಂದ್ ಆಚರಿಸಲಾಗಿದೆ. ಟೋಲ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News