ಮಾದಕ ವಸ್ತು ಮಾರಾಟ: ಯುವಕ ಸೆರೆ

Update: 2018-12-07 13:49 GMT

ಬೆಂಗಳೂರು, ಡಿ.7: ಮಾದಕ ವಸ್ತು ಕೊಕೇನ್ ಮಾರಾಟ ಮಾಡುತ್ತಿದ್ದ ಆರೋಪದಡಿ ಯುವಕನೋರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.

ನಗರದ ಬಸವನಗುಡಿಯ ಮೋಯಿನ್(28) ಬಂಧಿತ ಆರೋಪಿ ಎಂದು ಪೊಲೀಸರು ಗುರುತಿಸಿದ್ದಾರೆ.

ನಗರದ ಪುಟ್ಟೇನಹಳ್ಳಿಯ 18ನೇ ಕ್ರಾಸ್ ರಸ್ತೆಯಲ್ಲಿ ಯುವಕನೊಬ್ಬ ಮಾದಕ ವಸ್ತು ಕೊಕೇನ್ ತನ್ನ ವಶದಲ್ಲಿಟ್ಟುಕೊಂಡು ಮಾರಾಟ ಮಾಡಲು ಯತ್ನಿಸುತ್ತಿದ್ದಾನೆಂಬ ಮಾಹಿತಿ ಸಂಗ್ರಹಿಸಿ ಸಿಸಿಬಿ ಪೊಲೀಸರು ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಸಿಸಿಬಿ ತಿಳಿಸಿದೆ.

ಆರೋಪಿಯಿಂದ 2 ಗ್ರಾಂ ಕೊಕೇನ್, ಮೊಬೈಲ್ ಜಪ್ತಿ ಮಾಡಲಾಗಿದ್ದು, ಈ ಸಂಬಂಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News