ಬಂಟ್ವಾಳ: ಡಿ. 9ರಂದು ಇಂದಿರಾ ಕ್ಯಾಂಟೀನ್ ಉದ್ಘಾಟನಾ ಸಮಾರಂಭ

Update: 2018-12-07 15:00 GMT

ಬಂಟ್ವಾಳ, ಡಿ. 7: ಮಾಜಿ ಸಚಿವ, ಚಿತ್ರನಟ ಅಂಬರೀಶ್ ನಿಧನ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಬಂಟ್ವಾಳದ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಸಮಾರಂಭ ಮತ್ತು 94ಸಿ ಮತ್ತು 94ಸಿಸಿ ಹಕ್ಕುಪತ್ರ ವಿತರಣಾ ಸಮಾರಂಭ ಡಿ. 9ರಂದು ಬೆಳಗ್ಗೆ 9.30ಕ್ಕೆ ಬಂಟ್ವಾಳ ತಾಲೂಕು ಕಂದಾಯ ಇಲಾಖೆ, ಪುರಸಭೆ ಬಂಟ್ವಾಳ ಆಶ್ರಯದಲ್ಲಿ ನಡೆಯುವ ಈ ಸಮಾರಂಭ ತಾಲೂಕು ಕಚೇರಿ ಪ್ರಾಂಗಣದಲ್ಲಿ ನಡೆಯಲಿದೆ.

ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮತ್ತು ಹಕ್ಕುಪತ್ರ ವಿತರಣೆಯನ್ನು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ನಡೆಸುವರು.

ಈ ಸಂದರ್ಭ ಅಧ್ಯಕ್ಷತೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲ್, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ವಿಧಾನಪರಿಷತ್ತು ವಿರೋಧ ಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಪುತ್ತೂರು ಶಾಸಕ ಸಂಜೀವ ಮಠಂದುರು, ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ಪ್ರತಾಪ್ ಚಂದ್ರ ಶೆಟ್ಟಿ, ಬಿ.ಎಂ.ಫಾರೂಕ್, ಹರೀಶ್ ಕುಮಾರ್, ಆಯನೂರು ಮಂಜುನಾಥ, ಭೋಜೇಗೌಡ, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ವಿವಿಧ ಅಕಾಡಮಿಗಳ ಅಧ್ಯಕ್ಷರಾದ ಎ.ಸಿ.ಭಂಡಾರಿ, ಆರ್.ಪಿ.ನಾಯ್ಕ, ಕರಂಬಾರು ಮುಹಮ್ಮದ್, ಪಿ.ಸಿ.ಜಯರಾಮ, ಜಿಲ್ಲಾಧಿಕಾರಿ ಸಸಿಕಾಂತ ಸೆಂಥಿಲ್, ಜಿಪಂ ಇಒ ಡಾ. ಸೆಲ್ವಮಣಿ ಆರ್, ಎಸ್ಪಿ ಡಾ. ಬಿ.ಆರ್.ರವಿಕಾಂತೇಗೌಡ ಭಾಗವಹಿಸುವರು ಎಂದು ತಹಶೀಲ್ದಾರ್ ಪುರಂದರ ಹೆಗ್ಡೆ ಮತ್ತು ಮುಖ್ಯಾಧಿಕಾರಿ ರೇಖಾ ಜೆ. ಶೆಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News