×
Ad

ಮಂಗಳೂರು: ಮಸಾಜ್ ಪಾರ್ಲರ್‌ಗೆ ದಾಳಿ; ಮೂವರು ಯುವತಿಯರ ರಕ್ಷಣೆ

Update: 2018-12-07 20:39 IST

ಮಂಗಳೂರು, ಡಿ.7: ನಗರದ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಕೆಎಸ್ ರಾವ್ ರಸ್ತೆಯ ಕಟ್ಟಡವೊಂದರಲ್ಲಿ ಅಕ್ರಮವಾಗಿ ಬಾಡಿ ಮಸಾಜ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಆರೋಪದಲ್ಲಿ ಮಸಾಜ್ ಪಾರ್ಲರ್‌ಗೆ ನಗರ ಸಿಸಿಬಿ ಪೊಲೀಸರು ದಾಳಿ ನಡೆಸಿ ಮೂವರು ಯುವತಿಯರನ್ನು ರಕ್ಷಿಸಿದ್ದಾರೆ.

ಮಸಾಜ್ ಪಾರ್ಲರ್‌ನಲ್ಲಿ ವೇಶ್ಯಾವಾಟಿಕೆಗೆ ಪ್ರೇರೇಪಿಸುತ್ತಿದ್ದ ಆರೋಪಿ ರೋಶನ್ ದಾಳಿ ಸಮಯ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ನಗರದ ಕೆ.ಎಸ್.ರಾವ್ ರಸ್ತೆಯಲ್ಲಿರುವ ಮಸಾಜ್ ಪಾರ್ಲರ್‌ನಲ್ಲಿ ಬಾಡಿ ಮಸಾಜ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದರು. ಸಿಸಿಬಿ ಘಟಕದ ಇನ್‌ಸ್ಪೆಕ್ಟರ್ ಶಾಂತಾರಾಮ, ಉತ್ತರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸುರೇಶ್‌ಕುಮಾರ್ ಹಾಗೂ ಸಿಸಿಬಿ ಘಟಕದ ಪಿಎಸ್ಸೈ ಶ್ಯಾಮ್‌ಸುಂದರ್, ಎಚ್.ಡಿ. ಕಬ್ಬಾಳ್ ರಾಜ್ ಹಾಗೂ ಸಿಸಿಬಿ ಘಟಕದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News