ರವಿ ಬೆಳಗೆರೆ ವಿರುದ್ಧ ಅಧೀನ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆ

Update: 2018-12-07 15:49 GMT

ಬೆಂಗಳೂರು, ಡಿ.7: ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಹಾಗೂ ಸಹೋದ್ಯೋಗಿ ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಪತ್ರಕರ್ತ ರವಿ ಬೆಳಗೆರೆ ವಿರುದ್ಧ ಅಧೀನ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. 

ಪ್ರಕರಣ ರದ್ದು ಕೋರಿ ಪತ್ರಕರ್ತ ರವಿ ಬೆಳಗೆರೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್.ದಿನೇಶ್‌ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಈ ಆದೇಶ ನೀಡಿತು. ಅಧೀನ ನ್ಯಾಯಾಲಯ ನನ್ನ ವಿರುದ್ಧ ನಡೆಸುತ್ತಿರುವ ವಿಚಾರಣೆ ಕಾನೂನು ಬಾಹಿರ. ದೂರಿನ ವಸ್ತುಸಂಗತಿಗಳು ಅಸಮಂಜಸವಾಗಿವೆ ಮತ್ತು ಪ್ರಕರಣದಲ್ಲಿ ಸಾಕ್ಷಾಧಾರಗಳ ಕೊರತೆಯಿದೆ. ಹೀಗಾಗಿ, ವಿಚಾರಣೆ ರದ್ದುಗೊಳಿಸಬೇಕೆಂದು ವಿ ಬೆಳಗೆರೆ ಅರ್ಜಿಯಲ್ಲಿ ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News