ಸೊಹ್ರಾಬುದ್ದೀನ್ ನಕಲಿ ಎನ್‌ಕೌಂಟರ್ ಪ್ರಕರಣ: ಡಿ.21ರಂದು ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪು

Update: 2018-12-07 16:02 GMT

ಹೊಸದಿಲ್ಲಿ, ಡಿ.7: ಸೊಹ್ರಾಬುದ್ದೀನ್ ಶೇಖ್ ನಕಲಿ ಎನ್‌ಕೌಂಟರ್ ಪ್ರಕರಣದ ವಿಚಾರಣೆ ಮುಗಿಸಿರುವ ಸಿಬಿಐ ವಿಶೇಷ ನ್ಯಾಯಾಲಯ ಡಿ.21ರಂದು ತೀರ್ಪು ನೀಡಲಿದೆ ಎಂದು ಮೂಲಗಳು ತಿಳಿಸಿವೆ. 2005ರಲ್ಲಿ ನಡೆದಿದ್ದ ಈ ಪ್ರಕರಣದಲ್ಲಿ ಶೇಖ್‌ನ ಪತ್ನಿ ಕೌಸರ್ ಬಿ ಕೂಡಾ ಹತರಾಗಿದ್ದರು.

ಶೇಖ್‌ನ ಸಹಾಯಕ, ಪ್ರಕರಣದ ಪ್ರತ್ಯಕ್ಷದರ್ಶಿಯಾಗಿದ್ದ ತುಳಸೀರಾಮ್ ಪ್ರಜಾಪತಿಯನ್ನು ಕೆಲ ತಿಂಗಳ ಬಳಿಕ ಹತ್ಯೆ ಮಾಡಲಾಗಿತ್ತು. ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಗುಜರಾತ್ ಭಯೋತ್ಪಾದಕ ನಿಗ್ರಹ ದಳದ ಮಾಜಿ ಮುಖ್ಯಸ್ಥ ಡಿಜಿ ವಂಝಾರಾ ಹಾಗೂ ಇತರ ನಾಲ್ವರು ಪೊಲೀಸ್ ಅಧಿಕಾರಿಗಳನ್ನು 2014ರಲ್ಲಿ ಖುಲಾಸೆಗೊಳಿಸಲಾಗಿತ್ತು. ಉಳಿದ 22 ಪೊಲೀಸ್ ಅಧಿಕಾರಿಗಳು ಆರೋಪಿಗಳಾಗಿ ವಿಚಾರಣೆ ಎದುರಿಸಿದ್ದು ಡಿ.21ರಂದು ತೀರ್ಪು ಹೊರಬೀಳಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News