ಮಲ್ಯ ಅರ್ಜಿಗೆ ಪ್ರತಿಕ್ರಿಯಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

Update: 2018-12-07 16:03 GMT
ವಿಜಯ್ ಮಲ್ಯ 

ಹೊಸದಿಲ್ಲಿ, ಡಿ.7: ತನ್ನನ್ನು ತಲೆಮರೆಸಿಕೊಂಡಿರುವ ಅಪರಾಧಿ ಎಂದು ಘೋಷಿಸಿ ತನ್ನ ಆಸ್ತಿಗಳನ್ನು ಜಪ್ತಿ ಮಾಡಿಕೊಳ್ಳುವ ನಿರ್ಧಾರದ ವಿರುದ್ಧ ಉದ್ಯಮಿ ವಿಜಯ್ ಮಲ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಈ ಕುರಿತು ಪ್ರತಿಕ್ರಿಯಿಸುವಂತೆ ಕೇಂದ್ರ ಸರಕಾರಕ್ಕೆ ಸೂಚಿಸಿದೆ.

 ಆದರೆ ಮಲ್ಯ ವಿರುದ್ಧ ನಡೆಯುತ್ತಿರುವ ಕಾರ್ಯಕಲಾಪಗಳಿಗೆ ತಡೆ ನೀಡಲು ಸಿಜೆಐ ರಂಜನ್ ಗೊಗೊಯ್, ನ್ಯಾಯಾಧೀಶರಾದ ಎಸ್‌ಕೆ ಕೌಲ್ ಮತ್ತು ಕೆಎಂ ಜೋಸೆಫ್ ಅವರಿದ್ದ ನ್ಯಾಯಪೀಠ ನಿರಾಕರಿಸಿದೆ. ತಾನು ತಲೆಮರೆಸಿಕೊಂಡಿರುವ ಆರ್ಥಿಕ ಅಪರಾಧಿಯಲ್ಲ ಮತ್ತು ಹಣ ಅಕ್ರಮ ಸಾಗಣೆ ಪ್ರಕರಣದಲ್ಲಿ ತೊಡಗಿಸಿಕೊಂಡಿಲ್ಲ ಎಂದು ಮಲ್ಯ ಅರ್ಜಿಯಲ್ಲಿ ತಿಳಿಸಿದ್ದಾರೆ. ಮಲ್ಯರನ್ನು ತಲೆಮರೆಸಿಕೊಂಡಿರುವ ಆರ್ಥಿಕ ಅಪರಾಧಿ ಎಂದು ಘೋಷಿಸುವ ಪ್ರಕ್ರಿಯೆಗೆ ಚಾಲನೆ ದೊರೆತಿದ್ದು ಇದನ್ನು ಪ್ರಶ್ನಿಸಿ ಅವರು ಅರ್ಜಿ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News