ರಾಮಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ಪರಿಹಾರವಲ್ಲ: ಸುಪ್ರೀಂ ಕೋರ್ಟ್ ಹಿರಿಯ ನ್ಯಾ.ಕೆ.ಎನ್.ಭಟ್

Update: 2018-12-07 16:13 GMT

ಬೆಂಗಳೂರು, ಡಿ.7: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ಪರಿಹಾರವಲ್ಲವೆಂದು ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯವಾದಿ ಕೆ.ಎನ್.ಭಟ್ ತಿಳಿಸಿದರು.

ಶುಕ್ರವಾರ ಅಡ್ವೋಕೇಟ್ಸ್ ಫಾರ್ ಡೆಮಾಕ್ರಸಿ ನಗರದ ಎನ್‌ಜಿಒ ಸಭಾಂಗಣದಲ್ಲಿ ಆಯೋಜಿಸಿದ್ದ ರಾಮಜನ್ಮಭೂಮಿ ಸತ್ಯಾಸತ್ಯತೆ ಹಾಗೂ ಕಾನೂನು ಮಾಹಿತಿ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜನತೆ ಕೇಂದ್ರ ಸರಕಾರ ಸುಗ್ರೀವಾಜ್ಞೆ ಮೂಲಕ ರಾಮಮಂದಿರ ನಿರ್ಮಿಸಬೇಕೆಂದು ಒತ್ತಾಯ ಮಾಡುತ್ತಿದ್ದಾರೆ. ಇದರಿಂದ ಯಾವುದೆ ಪ್ರಯೋಜನ ಆಗುವುದಿಲ್ಲವೆಂದು ತಿಳಿಸಿದರು.

ರಾಮಮಂದಿರ ನಿರ್ಮಾಣಕ್ಕೆ ಯಾವುದೆ ಅಡ್ಡ ಮಾರ್ಗಗಳಿಲ್ಲ. ಕೇಂದ್ರ ಸರಕಾರ ಸುಗ್ರೀವಾಜ್ಞೆ ಮೂಲಕ ರಾಮಮಂದಿರಕ್ಕೆ ಸಂಬಂಧಿಸಿದ ಭೂಮಿಯನ್ನು ಕೊಟ್ಟರೂ, ಪ್ರಕರಣ ನ್ಯಾಯಾಲದಯಲ್ಲಿರುವುದರಿಂದ ಮಂದಿರ ಕಟ್ಟಲು ಸಾಧ್ಯವಿಲ್ಲ. ಹೀಗಾಗಿ ಸುಪ್ರೀಂ ಕೋರ್ಟ್ ಆದೇಶದ ಮೂಲಕ ಮಾತ್ರವೆ ಸುಸೂತ್ರವಾಗಿ ಮಂದಿರ ನಿರ್ಮಾಣ ಸಾಧ್ಯವೆಂದು ಅವರು ಹೇಳಿದರು.

ರಾಮಮಂದಿರ ನಿರ್ಮಾಣ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಮುಸ್ಲಿಂ ಮುಖಂಡರ ಜತೆ ಸಮಾಲೋಚನೆ ನಡೆಸಿ, ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಇಂತಹ ಸುಧಾರಣಾ ಕಾರ್ಯಕ್ರಮಗಳ ಮೂಲಕ ಎಲ್ಲರೂ ಒಂದಾದರೆ ರಾಮಮಂದಿರ ಕಟ್ಟಲು ಸಾಧ್ಯವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಈ ವೇಳೆ ಹೈಕೋರ್ಟ್ ನಿವೃತ್ತ ನ್ಯಾ.ಅಶೋಕ್ ಬಿ.ಹಿಂಚಿಗೇರಿ ಉಪಸ್ಥಿತಿರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News