×
Ad

ಡಿ.12ರಂದು ಪೌರಕಾರ್ಮಿಕರ ನೇರ ನೇಮಕಾತಿಗೆ ಆಗ್ರಹಿಸಿ ಸುವರ್ಣಸೌಧಕ್ಕೆ ಮುತ್ತಿಗೆ

Update: 2018-12-07 22:07 IST

ಹುಬ್ಬಳ್ಳಿ, ಡಿ.7: ಮಹಾನಗರ ಪಾಲಿಕೆ ಗುತ್ತಿಗೆ ಪೌರಕಾರ್ಮಿಕರ ನೇರ ನೇಮಕಾತಿಗೆ ಆಗ್ರಹಿಸಿ ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಧಾರವಾಡ ಜಿಲ್ಲಾ ಎಸ್ಸಿ, ಎಷ್ಟಿ ಪೌರಕಾರ್ಮಿಕರ ಸಂಘದ ಅಧ್ಯಕ್ಷ ವಿಜಯ ಗುಂಟ್ರಾಳ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2011ರಿಂದ ಇಲ್ಲಿಯವರೆಗೂ ನಿರಂತರವಾಗಿ ಬಾಕಿ ವೇತನ ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ, ಪಾಲಿಕೆ ಆಯುಕ್ತರಿಗೆ, ಪೊಲೀಸ್ ಆಯುಕ್ತರಿಗೆ, ಕಾರ್ಮಿಕ ಇಲಾಖೆಗೆ ಮನವಿ ಸಲ್ಲಿಸುತ್ತಾ ಬಂದಿದ್ದೇವೆ. ಆದರೂ ಯಾವ ಅಧಿಕಾರಿಗಳು ನಮ್ಮ ಅಳಲನ್ನು ಕೇಳಿಲ್ಲ. ಹೀಗಾಗಿ ನೇರ ನೇಮಕಾತಿ ಹಾಗೂ ಬಾಕಿ ಮೊತ್ತ ಪಾವತಿಸುವಂತೆ ಆಗ್ರಹಿಸಿ ಡಿ.12ರಂದು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ತೀರ್ಮಾನಿಸಲಾಗಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News