ತೆಂಕನಿಡಿಯೂರು ಕಾಲೇಜು: ಜಿಲ್ಲಾ ಮಟ್ಟದ ಸ್ವೀಪ್ ಸ್ಪರ್ಧೆ

Update: 2018-12-07 17:15 GMT

ಉಡುಪಿ, ಡಿ.7: ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಡಿ.7ರಂದು ಜಿಲ್ಲಾ ಮಟ್ಟದ ಸ್ಪೀಪ್ ಸ್ಪರ್ಧೆಗಳಾದ ಪ್ರಬಂಧ ಮತ್ತು ರಸಪ್ರಶ್ನೆ ಸ್ಪರ್ಧೆುನ್ನು ಕಾಲೇಜಿನಲ್ಲಿ ನಡೆಸಲಾಯಿತು.

ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದ ತೆಂಕನಿಡಿಯೂರು ಗ್ರಾಪಂ ಅಧ್ಯಕ್ಷ ಕೃಷ್ಣ ಶೆಟ್ಟಿ, ಚುನಾವಣಾ ಆಯೋಗ ಹಮ್ಮಿಕೊಂಡಿರುವ ಸ್ಪೀಪ್ ಸ್ಪರ್ಧೆಗಳು ಮತದಾನದ ಅರಿವನ್ನು ಮೂಡಿಸುವಲ್ಲಿ ಉತ್ತಮ ಕಾರ್ಯಕ್ರಮವಾಗಿದೆ. ವಿದ್ಯಾರ್ಥಿಗಳು ಈ ಸ್ಪರ್ಧೆಗಳಲ್ಲಿ ಸಕ್ರಿಯವಾಗಿ ಭಾ ಗವಹಿಸಬೇಕೆಂದು ಕರೆ ನೀಡಿದರು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಬಾಲಕೃಷ್ಣ ಎಸ್. ಹೆಗ್ಡೆ ವಹಿಸಿ ಮಾತನಾಡಿ, ಇಂದಿನ ರಾಜಕೀಯದಲ್ಲಿ ಮತದಾನ ಯಶಸ್ವಿಯಾಗಿ ನಡೆದು, ನಮ್ಮ ಯುವಜನತೆ ಉತ್ತಮ ಪ್ರತಿನಿಧಿಗಳನ್ನು ಆಯ್ಕೆ ಮಾಡುವಲ್ಲಿ ಇದೊಂದು ಉತ್ತಮ ಕಾರ್ಯಕ್ರಮವಾಗಿದೆ ಎಂದರು.

ಕಾಲೇಜಿನ ಸ್ಪೀಪ್ ಸಂಯೋಜಕ, ರಾಜ್ಯಶಾಸ್ತ್ರ ವಿಭಾಗದ ಮಂಜುನಾಥ, ಪ್ರಸ್ತಾವಿಕ ನುಡಿಗಳೊಂದಿಗೆ ಸ್ಪೀಪ್‌ನ ಮಹತ್ವಗಳನ್ನು ತಿಳಿಸಿ ಸ್ವಾಗತಿಸಿದರು. ರಾಜ್ಯಶಾಸ್ತ್ರ ವಿಭಾಗದ ದಯಾನಂದ ಕುಮಾರ್ ವಂದಿಸಿದರು. ಕಾರ್ಯಕ್ರಮ ದಲ್ಲಿ ಅಂಗ್ಲಬಾಷಾ ವಿಬಾಗದ ಮುಖ್ಯಸ್ಥ ಪ್ರಸಾದ್ ರಾವ್ ಎಂ, ಇತಿಹಾಸ ವಿಬಾಗದ ಮುಖ್ಯಸ್ಥ ಡಾ. ಸುರೇಶ್ ರೈ ಉಪಸ್ಥಿತರಿದ್ದರು.

ವಿಜೇತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸ್ಪರ್ಧೆಗಳಲ್ಲಿ ಜಿಲ್ಲೆಯ ಹಲವು ಸರಕಾರಿ ಮತ್ತು ಖಾಸಗಿ ಕಾಲೇಜಿನ ವಿದ್ಯಾಥಿಗಳು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News