ನನ್ನ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಬಿಜೆಪಿ ಆರೋಪದಲ್ಲಿ ಹುರುಳಿಲ್ಲ: ಸಿದ್ದರಾಮಯ್ಯ

Update: 2018-12-08 12:39 GMT

ಬೆಂಗಳೂರು, ಡಿ. 8: ‘ನಾನು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಬಿಜೆಪಿ ಆರೋಪದಲ್ಲಿ ಯಾವುದೇ ಹುರುಳಿಲ್ಲ, ಅವೆಲ್ಲವೂ ನಿರಾಧಾರ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ವೈಫಲ್ಯಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿ ಮುಖಂಡರು ರಾಜ್ಯದ ಜನತೆಯನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಟ್ವಿಟ್ಟರ್ ಮೂಲಕ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಿಎಜಿ ವರದಿ ಉಲ್ಲೇಖಿಸಿ ಬಿಜೆಪಿ ಮಾಡಿದ್ದ ಆರೋಪಗಳಿಗೆ ಟ್ವಿಟ್ಟರ್ ಮೂಲಕವೇ ದಾಖಲೆಗಳನ್ನು ನೀಡಿರುವ ಸಿದ್ದರಾಮಯ್ಯ, ಬಿಜೆಪಿ ಅವರ ವಿರುದ್ಧ ಮಾಡಿದ್ದ ಎಲ್ಲ ಆರೋಪಗಳನ್ನು ತಳ್ಳಿಹಾಕಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News