ಹೆಮ್ಮಾಡಿ ಪ್ರೀಮಿಯರ್ ಲೀಗ್ ಉದ್ಘಾಟನೆ

Update: 2018-12-08 14:06 GMT

ಕುಂದಾಪುರ, ಡಿ.8: ಹೆಮ್ಮಾಡಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ಹೆಮ್ಮಾಡಿ ಪ್ರೀಮಿಯರ್ ಲೀಗ್-2018 ನ್ನು ಕುಂದಾಪುರ ತಾಲೂಕು ಪಂಚಾಯತ್ ಸದಸ್ಯ ರಾಜು ದೇವಾಡಿಗ ಶನಿವಾರ ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಹೆಮ್ಮಾಡಿ ಗ್ರಾಪಂ ಅಧ್ಯಕ್ಷೆ ಜ್ಯೋತಿ ಹರೀಶ್ ಭಂಡಾರಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾಪಂ ಸದಸ್ಯರಾದ ಆನಂದ ಪಿ.ಎಚ್., ರಾಘವೇಂದ್ರ ಪೂಜಾರಿ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಅಶೋಕ ದೇವಾಡಿಗ, ಉದ್ಯಮಿ ಲವೇಶ್ ಕೋಟ್ಯಾನ್, ಜಟ್ಟಿಗೇಶ್ವರ ಕ್ರಿಕೆಟ್ ಕ್ಲಬ್‌ನ ಸಂಸ್ಥಾಪಕ ಅಧ್ಯಕ್ಷ ತೇಜ ದೇವಾಡಿಗ ಜಾಲಾಡಿ, ಫ್ರೆಂಡ್ಸ್ ಹೆಮ್ಮಾಡಿಯ ಗೌರವಾಧ್ಯಕ್ಷ ರಾಘ ವೇಂದ್ರ ಕುಲಾಲ್, ಅಧ್ಯಕ್ಷ ಸುರೇಶ್ ಪೂಜಾರಿ ಉಪಸ್ಥಿತರಿದ್ದರು.

ಫ್ರೆಂಡ್ಸ್ ಹೆಮ್ಮಾಡಿಯ ಕಿರಣ್ ದೇವಾಡಿಗ ಸ್ವಾಗತಿಸಿದರು. ಉದಯ ದೇವಾಡಿಗ ವಂದಿಸಿದರು. ಪತ್ರಕರ್ತ ಶ್ರೀಕಾಂತ ಹೆಮ್ಮಾಡಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News