×
Ad

ಮಂಗಳೂರು: ಅನೈತಿಕ ಚಟುವಟಿಕೆ ಸ್ಥಳಕ್ಕೆ ಪೊಲೀಸರ ತಂಡ ದಾಳಿ; ಓರ್ವ ಸೆರೆ

Update: 2018-12-08 23:26 IST
ಪುನೀತ್ ಕುಮಾರ್

ಮಂಗಳೂರು, ಡಿ.8: ಇಡ್ಯಾ ಗ್ರಾಮದ ಕಟ್ಟಡವೊಂದರಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಅರಿತ ಸುರತ್ಕಲ್ ಪೊಲೀಸರ ತಂಡ ದಾಳಿ ನಡೆಸಿ ಮೂವರು ಯುವತಿಯರನ್ನು ರಕ್ಷಿಸಿದ್ದು, ಓರ್ವನನ್ನು ವಾಹನ ಸಮೇತ ಬಂಧಿಸಿದ್ದಾರೆ.

ಪುನೀತ್ ಕುಮಾರ್ ಬಂಧಿತ ಆರೋಪಿ ಎಂದು ತಿಳಿದುಬಂದಿದೆ.

ದಾಳಿ ನಡೆಸಿದ ವೇಳೆ  ಪುನೀತ್ ಕುಮಾರ್ ನಮ್ಮನ್ನು ಅನೈತಿಕ ಚಟುವಟಿಕೆಯಲ್ಲಿ ಭಾಗಿಯಾಗಲು ಕರೆಸಿದ್ದಾಗಿ ಯುವತಿಯರು ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪುನೀತ್ ಕುಮಾರ್‌ನ್ನು ವಶಕ್ಕೆ ಪಡೆದ ಪೊಲೀಸರು ಆತನಿಂದ 51,450 ರೂ. ನಗದು, ಮೊಬೈಲ್ ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ  ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಮಂಗಳೂರು ನಗರ ಪೊಲೀಸ್ ಆಯುಕ್ತ ಸುರೇಶ್ ಟಿ.ಆರ್., ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಹನುಮಂತರಾಯ, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಉಮಾ ಪ್ರಶಾಂತ್ ಹಾಗೂ ಎಸಿಪಿ ಮಂಜುನಾಥ ಶೆಟ್ಟಿ ಮಾರ್ಗದರ್ಶನದಂತೆ ದಾಳಿ ನಡೆಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News