ಶ್ರೀನಗರದಲ್ಲಿ ಮೂವರು ಭಯೋತ್ಪಾದಕರ ಹತ್ಯೆ

Update: 2018-12-09 08:10 GMT

ಶ್ರೀನಗರ, ಡಿ.9: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಹೊರವಲಯದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ.

ಶ್ರೀನಗರ –ಬಂಡಿಪೊರಾ ರಸ್ತೆಯ ಮುಜ್ಗಂಡ್ ಪ್ರದೇಶದಲ್ಲಿ ಅಡಗಿ ಕುಳಿತಿದ್ದ   ಭಯೋತ್ಪಾದಕರಿಗಾಗಿ ಭದ್ರತಾ ಪಡೆಗಳು ಶನಿವಾರ ಸಂಜೆ ಕಾರ್ಯಾಚರಣೆ ಆರಂಭಿಸಿತ್ತು.

ರವಿವಾರ ಬೆಳಗ್ಗೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆಯಿತು. ಈ ಸಂದರ್ಭದಲ್ಲಿ ಮೂವರು ಭಯೋತ್ಪಾದಕರು ಭದ್ರತಾ ಪಡೆಯ  ಗುಂಡಿಗೆ ಬಲಿಯಾದರು. ಭದ್ರತಾ ಪಡೆಯ ಐವರು ಸಿಬ್ಬಂದಿಗಳು ಗಾಯಗೊಂಡಿದ್ದಾರೆ.

ಘಟನೆ ನಡೆದ ಸ್ಥಳದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News