ಸರಕಾರಿ ನೌಕರರ ಸಹಕಾರ ಇಲ್ಲದೆ ಪ್ರಗತಿ ಅಸಾಧ್ಯ: ರಘುಪತಿ ಭಟ್

Update: 2018-12-09 14:49 GMT

ಉಡುಪಿ, ಡಿ.9: ಸರಕಾರಿ ನೌಕರರು ಕಾನೂನು ಪ್ರಕಾರ ನಡೆದುಕೊಳ್ಳಬೇಕಾ ಗುತ್ತದೆ. ಆದರೆ ಜನಪ್ರತಿನಿಧಿಗಳಿಗೆ ಜನಹಿತ ಮುಖ್ಯವಾಗುತ್ತದೆ. ಆದುದರಿಂದ ಇಬ್ಬರು ಜತೆಯಾಗಿ ಶ್ರಮಿಸಿದಾಗ ಮಾತ್ರ ಸಮಾಜ ಅಭಿವೃದ್ಧಿ ಸಾಧ್ಯ ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ಹೇಳಿದ್ದಾರೆ.

ಉಡುಪಿಯ ಶಾರದಾ ಇಂಟರ್‌ನ್ಯಾಶನಲ್ ಹೊಟೇಲ್ ಸಭಾಂಗಣದಲ್ಲಿ ರವಿವಾರ ನಡೆದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಉಡುಪಿ ಜಿಲ್ಲಾ ಶಾಖೆಯ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡುತಿದ್ದರು.

ಸರಕಾರಿ ನೌಕರರ ಸಹಕಾರದಿಂದ ಮಾತ್ರ ಜನಪ್ರತಿನಿಧಿಗಳು ಸರಿಯಾಗಿ ಕೆಲಸ ಮಾಡಲು ಸಾಧ್ಯ. ಸರಕಾರಿ ನೌಕರ ಸಹಕಾರ ಇಲ್ಲದೆ ಜನಪ್ರತಿನಿಧಿಗಳು ಯಶಸ್ವಿಯಾಗಲು ಸಾಧ್ಯವಿಲ್ಲ. ಸರಕಾರಿ ನೌಕರರನ್ನು ಎದುರು ಹಾಕಿಕೊಂಡು ದರ್ಪ ತೋರಿಸಿದರೆ ಚುನಾವಣೆಯಲ್ಲಿ ಗೆಲ್ಲಲು ಆಗುವುದಿಲ್ಲ ಎಂದರು.

ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಸೇರಿಗಾರ್ ಮಾತನಾಡಿ, ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಪರಿಶ್ರಮದಿಂದ ರಾಜ್ಯ ಸರಕಾರಿ ನೌಕರರು ಉತ್ತಮ ವೇತನ ಪಡೆದುಕೊಳ್ಳುತ್ತಿದ್ದಾರೆ. ಪ್ರಾಕೃತಿಕ ವಿಕೋಪದಿಂದ ಹಾನಿ ಗೊಳಾಗದ ಕೊಡಗು ಜಿಲ್ಲೆಯ ಪುನರ್ ವಸತಿಗಾಗಿ ರಾಜ್ಯ ಸರಕಾರಿ ನೌಕಕರು ನೀಡಿರುವ ಒಂದು ದಿನದ ವೇತನ ಸುಮಾರು 102 ಕೋಟಿ ರೂ. ಸಂಗ್ರಹ ವಾಗಿದೆ. ಈ ದೇಣಿಗೆಯನ್ನು ಮುಂದಿನ ದಿನಗಳಲ್ಲಿ ಮುಖ್ಯ ಮಂತ್ರಿ ಕುಮಾರ ಸ್ವಾಮಿ ಅವರಿಗೆ ಹಸ್ತಾಂತರಿಸಲಾಗುತ್ತದೆ. ಇದರಿಂದ ಸರಕಾರಿ ನೌಕರರ ಹೆಸರಿನಲ್ಲಿ ಸಂತ್ರಸ್ತರಿಗೆ ಮನೆಗಳನ್ನು ನಿರ್ಮಿಸಿಕೊಡಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ರಾಷ್ಟ್ರಮಟ್ಟದ ವಿಶೇಷ ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ವಿತರಣೆ ಹಾಗೂ ನಿವೃತ್ತ ನೌಕರರನ್ನು ಗೌರವಿಸಲಾಯಿತು. ಜಿಲ್ಲಾ ಖಜಾನೆ ಇಲಾಖೆ ಉಪನಿರ್ದೇಶಕಿ ಸಾವಿತ್ರಿ, ಸಂಘದ ಗೌರವಾಧ್ಯಕ್ಷ ರವೀಂದ್ರ ಹೆಬ್ಬಾರ್, ಪ್ರಧಾನ ಕಾರ್ಯದರ್ಶಿ ಎಚ್.ಉದಯ ಕುಮಾರ್ ಶೆಟ್ಟಿ, ಖಜಾಂಚಿ ಬಿ. ಚಂದ್ರಶೇಖರ್, ರಾಜ್ಯ ಪರಿಷತ್ ಸದಸ್ಯ ಕಿರಣ್, ಉಪಾಧ್ಯಕ್ಷ ಎಚ್.ದೇವರಾಜ್ ಪಾಣ, ಉಪಾಧ್ಯಕ್ಷ ಸುಭಾಶ್ಚಂದ್ರ ಹೆಗ್ಡೆ, ಜೊತೆ ಕಾರ್ಯ ದರ್ಶಿ ರಾಘವೇಂದ್ರ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News