ಕನಕದಾಸರ ಸ್ತಬ್ಧಚಿತ್ರಗಳಿಗೆ ಸಚಿವ ಕೃಷ್ಣಬೈರೇಗೌಡ ಅವರಿಂದ ಚಾಲನೆ

Update: 2018-12-09 15:51 GMT

ಕೋಲಾರ, ಡಿ. 9: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೋಲಾರ ಇವರ ವತಿಯಿಂದ ನಗರದ ಟಿ.ಚನ್ನಯ್ಯ ರಂಗ ಮಂದಿರದಲ್ಲಿ ಇಂದು ಏರ್ಪಡಿಸಿದ್ದ `ದಾಸ ಶ್ರೇಷ್ಠ ಶ್ರೀ ಭಕ್ತ ಕನಕದಾಸರ 531ನೇ ಜಯಂತೋತ್ಸವ' ಕಾರ್ಯಕ್ರಮವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಕೃಷ್ಣ ಬೈರೇಗೌಡ ಅವರು ಉದ್ಘಾಟಿಸಿದರು.

ಸಚಿವರು, ಲೋಕಸಭಾ ಸದಸ್ಯರಾದ ಕೆ.ಹೆಚ್. ಮುನಿಯಪ್ಪ, ಶಾಸಕರಾದ ಕೆ.ಶ್ರೀನಿವಾಸಗೌಡ, ಭಕ್ತ ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ನಂತರ ಕಲಾ ತಂಡ ಹಾಗೂ ಶ್ರೀ ಭಕ್ತ ಕನಕದಾಸರ ಸ್ತಬ್ಧಚಿತ್ರಗಳ ಮೆರವಣಿಗೆಗೆ ಎಲ್ಲಾ ಗಣ್ಯರು ಚಾಲನೆ ನೀಡಿದರು.ಮೆರವಣಿಗೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ,  ನಗರಸಭೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ತೋಟಗಾರಿಕೆ ಇಲಾಖೆಗಳ ಸ್ತಬ್ಧಚಿತ್ರಗಳು ಹಾಗೂ ವಿವಿಧ ಕಲಾ ತಂಡಗಳು ಭಾಗವಹಿಸಿದ್ದವು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಶ್ರೀಮತಿ ಮಹಾಲಕ್ಷ್ಮಿ ಪ್ರಸಾದ್‍ಬಾಬು, ಜಿಲ್ಲಾಧಿಕಾರಿ ಜೆ.ಮಂಜುನಾಥ್, ಜಿಲ್ಲಾ ಪೊಲೀಸ್ ರಕ್ಷಣಾಧಿಕಾರಿಗಳಾದ ಡಾ.ರೋಹಿಣಿ ಕಟೋಚ್ ಸೆಪಟ್, ಅಪರ ಜಿಲ್ಲಾಧಿಕಾರಿಗಳಾದ ಶ್ರೀಮತಿ ಪುಷ್ಪಲತಾ, ತಹಶೀಲ್ದಾರ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಡಿ.ಎಂ. ರವಿಕುಮಾರ್ ಹಾಗೂ ಸಮುದಾಯದ ಮುಖಂಡರು  ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News