ಜಾಹೀರಾತು ಪ್ರದರ್ಶನ ನಿಷೇಧ ವಿಚಾರ: ಆಕ್ಷೇಪಣೆಗೆ ಹೈಕೋರ್ಟ್ ಸೂಚನೆ

Update: 2018-12-09 18:21 GMT

ಬೆಂಗಳೂರು, ಡಿ. 9: ನಗರ ವ್ಯಾಪ್ತಿಯಲ್ಲಿ 1 ವರ್ಷ ಅವಧಿಗೆ ಎಲ್ಲ ಮಾದರಿಯ ಜಾಹೀರಾತುಗಳ ಪ್ರದರ್ಶನ ನಿಷೇಧಿಸಿ ಕೌನ್ಸಿಲ್ ಸಭೆಯಲ್ಲಿ ಕೈಗೊಂಡಿರುವ ನಿರ್ಣಯ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳಿಗೆ ಆಕ್ಷೇಪಣೆ ಸಲ್ಲಿಸುವಂತೆ ಬಿಬಿಎಂಪಿಗೆ ಹೈಕೋರ್ಟ್ ಸೂಚಿಸಿದೆ.

ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ಕೈಗೊಂಡಿರುವ ನಿರ್ಣಯ ರದ್ದುಪಡಿಸುವಂತೆ ಕೋರಿ ಮೆಸರ್ಸ್ ಅವಿನಾಶಿ ಆ್ಯಡ್ಸ್ ಔಟ್‌ಡೋರ್ ಅಡ್ವರ್ಟೈಸಿಂಗ್ ಸೇರಿ ನಗರದ ಹಲವು ಜಾಹೀರಾತು ಏಜೆನ್ಸಿಗಳು ಸಲ್ಲಿಸಿರುವ ತಕರಾರು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಪೀಠ, ಬಿಬಿಎಂಪಿ ವಕೀಲರಿಗೆ ಈ ಸೂಚನೆ ನೀಡಿ ವಿಚಾರಣೆಯನ್ನು ಡಿ.17ಕ್ಕೆ ಮುಂದೂಡಿತು.

ನಗರ ವ್ಯಾಪ್ತಿಯಲ್ಲಿ 1 ವರ್ಷದ ಅವಧಿಗೆ ಎಲ್ಲ ಬಗೆಯ ಜಾಹೀರಾತು ಪ್ರದರ್ಶನ ನಿಷೇಧಿಸಿ 2018ರ ಆ.6ರಂದು ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಇದನ್ನು ಪ್ರಶ್ನಿಸಿ ಹಲವು ಜಾಹೀರಾತು ಕಂಪೆನಿಗಳು ಹೈಕೋರ್ಟ್ ಮೆಟ್ಟಿಲೇರಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News