×
Ad

ಕರಾಟೆ: ಎಡಪದವು ಐಡಿಯಲ್ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

Update: 2018-12-10 12:23 IST

ಮಂಗಳೂರು, ಡಿ.10: ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘದ ಪ್ರಾಯೋಜಕತ್ವದಲ್ಲಿ ಶಿವಮೊಗ್ಗ ಜಿಲ್ಲೆ ಕರಾಟೆ ಶಿಕ್ಷಕರ ಸಂಘದ ಸಹಭಾಗಿತ್ವದಲ್ಲಿ ಶಿವಮೊಗ್ಗದ ಇಂಡೋರ್ ಸ್ಟೇಡಿಯಂನಲ್ಲಿ ನಡೆದ 4ನೇ ಕರ್ನಾಟಕ ರಾಜ್ಯ ಮುಕ್ತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಬ್ಲೂಬೆಲ್ಟ್ ವಿಭಾಗದಲ್ಲಿ ಎಡಪದವು ಐಡಿಯಲ್ ಆಂಗ್ಲ ಮಾಧ್ಯಮ ಶಾಲೆಯ 5ನೇ ತರಗತಿ ವಿದ್ಯಾರ್ಥಿ ರಿತೇಶ್ ವೈ. ಕೋಟ್ಯಾನ್ ವೈಯಕ್ತಿಕ ಕಟಾ ವಿಭಾಗದಲ್ಲಿ ತೃತೀಯ ಸ್ಥಾನ ಹಾಗೂ ಕುಮಿಟಿ ವಿಭಾಗದಲ್ಲಿ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿಯ ಪದಕ ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ. 

ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ನಡೆದ 14ನೇ ರಾಷ್ಟ್ರೀಯ ಮುಕ್ತ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಕುಮಿಟಿ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ದ್ವಿತೀಯ ಸ್ಥಾನ ಗಳಿಸಿ ಬೆಳ್ಳಿ ಪದಕ ಗಳಿಸಿದ್ದಾರೆ.

ವೈಯಕ್ತಿಕ ಕಟಾ ಹಾಗೂ ಕುಮಿಟಿ ವಿಭಾಗದಲ್ಲಿ ಶ್ರೇಯಸ್ ಕುಮಾರ್ ರಾಜ್ಯಮಟ್ಟದಲ್ಲಿ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ ಗಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News