ಕೊಲ್ಲಿ ರಾಷ್ಟ್ರಗಳಲ್ಲಿ ಆಯುರ್ವೇದ ಚಿಕಿತ್ಸೆಯ ಚಿಂತನೆ: ಶ್ರೀ ರವಿಶಂಕರ ಗುರೂಜಿ

Update: 2018-12-10 17:55 GMT

ಬೆಂಗಳೂರು, ಡಿ.10: ಕೊಲ್ಲಿ ರಾಷ್ಟ್ರಗಳಲ್ಲಿ ಆಯುರ್ವೇದ ಚಿಕಿತ್ಸಾ ಪದ್ದತಿಯನ್ನು ಅಂಗೀಕರಿಸುವ ಬಗ್ಗೆ ಚಿಂತನೆ ನಡೆಸಿರುವುದು, ಭಾರತಕ್ಕೆ ಗೌರವದ ವಿಷಯವಾಗಿದೆ ಎಂದು ಆರ್ಟ್ ಆಫ್ ಲಿವಿಂಗ್‌ನ ಶ್ರೀ ರವಿಶಂಕರ ಗುರೂಜಿ ತಿಳಿಸಿದ್ದಾರೆ.

ಸೋಮವಾರ ನಗರದ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಯಲ್ಲಿ ಆಚಾರ್ಯ ರತ್ನಾನಂದಜೀ ಅವರ ಜನ್ಮದಿನದ ಪ್ರಯುಕ್ತ ಹಮ್ಮಿಕೊಂಡಿದ್ದ, ರಾಷ್ಟ್ರಮಟ್ಟದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಆಯುರ್ವೇದ ಓಮನ್ ರಾಷ್ಟ್ರದಲ್ಲಿ ಅಂಗೀಕೃತವಾಗಿದ್ದು, ಎಲ್ಲ ಕೊಲ್ಲಿ ರಾಷ್ಟ್ರಗಳಲ್ಲೂ ಅಂಗೀಕರಿಸುವಂತೆ ಚಿಂತನೆ ನಡೆಸಲಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಆಯುಷ್ ಇಲಾಖೆ ನಿರ್ದೇಶಕ ಮೀನಾಕ್ಷಿ ನೇಗಿ ಮಾತನಾಡಿ, ಖಾಸಗಿ ಸಂಸ್ಥೆಗಳು ಹಾಗೂ ಸರಕಾರ ಜೊತೆಗೂಡಿ ಆಯುರ್ವೇದ ಚಿಕಿತ್ಸಾ ಪದ್ಧತಿಯ ಕಾರ್ಯ ವೈಖರಿಯನ್ನು, ವೈಶಿಷ್ಯತೆಯನ್ನು ತಿಳಿಸಿದಾಗ, ಸಾರ್ವಜನಿಕರು ಇದರ ಉಪಯೋಗವನ್ನು ಹೆಚ್ಚಿನ ರೀತಿಯಲ್ಲಿ ಪಡೆದುಕೊಳ್ಳುತ್ತಾರೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News