"ವಿರೋಧ ಪಕ್ಷಗಳನ್ನು ದಮನಿಸಲು ಮುಂದಾಗಿದ್ದವರಿಗೆ ಮುಖಭಂಗ"

Update: 2018-12-11 12:26 GMT

ಬೆಳಗಾವಿ, ಡಿ.11: ಐದು ರಾಜ್ಯಗಳ ವಿಧಾನಸಭೆಯ ಚುನಾವಣೆಯ ಫಲಿತಾಂಶವು ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಮತದಾರ ನೀಡಿರುವ ತೀರ್ಪು ಜಾತ್ಯತೀತ ಪಕ್ಷಗಳತ್ತ ರಾಷ್ಟ್ರ ಸಾಗುತ್ತಿರುವುದರ ದ್ಯೋತಕವಾಗಿದೆ. ದೇಶದಾದ್ಯಂತ ಏಕಪಕ್ಷೀಯ ಆಡಳಿತದ ನಿರೀಕ್ಷೆ ಇಟ್ಟುಕೊಂಡು ವಿರೋಧ ಪಕ್ಷಗಳನ್ನು ದಮನ ಮಾಡಲು ಮುಂದಾಗಿದ್ದವರಿಗೆ ಮುಖಭಂಗವಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಐದು ರಾಜ್ಯಗಳ ಫಲಿತಾಂಶ ಜಾತ್ಯಾತೀತ ಪಕ್ಷಗಳೆಲ್ಲವೂ ಜತೆಯಾಗಿ ಚುನಾವಣೆ ಎದುರಿಸುವ ವೇದಿಕೆಯನ್ನು ದೊರಕಿಸಿಕೊಟ್ಟಿದೆ. ಕಾಂಗ್ರೆಸ್ ನಾಯಕಿ  ಸೋನಿಯಾ ಗಾಂಧಿ ಹಾಗೂ ಅಧ್ಯಕ್ಷ ರಾಹುಲ್‍ ಗಾಂಧಿ ಪ್ರಯತ್ನಕ್ಕೆ ಫಲ ಸಿಕ್ಕಿದೆ. ಈ ಸಂದರ್ಭದಲ್ಲಿ ಅವರನ್ನು ಅಭಿನಂದಿಸಲೇಬೇಕು. ಸಮಾನ ಮನಸ್ಕ ರಾಜಕೀಯ ನಾಯಕರನ್ನು ಒಂದೆಡೆಗೆ ತರಲು ರಾಹುಲ್‍ ಗಾಂಧಿ ಹಾಗೂ ಜಾತ್ಯಾತೀತ ಪಕ್ಷಗಳ ನಾಯಕರು ಮುಂದಾಗಬೇಕು ಎಂದು ಅವರು ಆಶಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News