ಡಿ. 13: ಚಿಕ್ಕಮಗಳೂರಿನಲ್ಲಿ 'ಟೀಮ್ ಹಸನೈನ್ ಖಿಯಾದ-18' ಕ್ಯಾಂಪ್

Update: 2018-12-11 17:23 GMT

ಚಿಕ್ಕಮಗಳೂರು, ಡಿ. 11: ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿಯ ಟೀಮ್ ಹಸನೈನ್  ಖಿಯಾದ-18 ಕ್ಯಾಂಪ್ ಎಸ್ಸೆಸ್ಸೆಫ್ ರಾಜ್ಯ ಸಮಿತಿ ಉಪಾಧ್ಯಕ್ಷ ಸಯ್ಯದ್ ಹಾಮಿಮ್ ತಂಙಳ್ ರವರ ಅಧ್ಯಕ್ಷತೆಯಲ್ಲಿ ಡಿ. 13 ರಂದು ಬೆಳಗ್ಗೆ 9 ಗಂಟೆಗೆ ಶಾದುಲೀ ಜುಮಾ ಮಸ್ಜಿದ್ ಮದರಸ ಹಾಲ್ ಉಪ್ಪಳ್ಳಿಯಲ್ಲಿ ನಡೆಯಲಿದೆ.

ಎಸ್ಸೆಸ್ಸೆಫ್ ರಾಜ್ಯ ಕೋಶಾಧಿಕಾರಿ ಶರೀಫ್ ಮಾಸ್ಟರ್ ಬೆಂಗಳೂರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ರಾಜ್ಯ ಸಮಿತಿ ಕಾರ್ಯದರ್ಶಿ ಮೌಲಾನಾ ಸುಫ್ಯಾನ್ ಸಖಾಫಿ ತರಗತಿಯನ್ನು ನಡೆಸಲಿರುವರು.

ಕಾರ್ಯಕ್ರಮದಲ್ಲಿ ರಾಜ್ಯ ಸಮಿತಿ ಸದಸ್ಯರಾದ ಉಸ್ಮಾನ್ ಹಂಡುಗುಳಿ, ಹೊಸ್ಮಾರ್ ಸ ಅದಿ, ಇಬ್ರಾಹಿಂ ಚಿಕ್ಕಮಗಳೂರು, ಶಾಹಿನ್ ಚಿಕ್ಕಮಗಳೂರು ಹಾಗೂ ಚಿಕ್ಕಮಗಳೂರು ಜಿಲ್ಲಾ ನಾಯಕರು ಭಾಗವಹಿಸಲಿದ್ದಾರೆ ಎಂದು ಎಸ್ಸೆಸ್ಸೆಫ್ ಟೀಮ್ ಹಸನೈನ್ ರಾಜ್ಯ ಉಸ್ತುವಾರಿ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು  ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News