ರಾಜಸ್ಥಾನದ ಮುಖ್ಯಮಂತ್ರಿ ಯಾರು ?: ಇಂದು ಕಾಂಗ್ರೆಸ್‌ನ ಶಾಸಕಾಂಗ ಸಭೆ

Update: 2018-12-11 18:47 GMT

ಜೈಪುರ, ಡಿ. 11: ರಾಜಸ್ಥಾನದ ಮುಖ್ಯಮಂತ್ರಿಯನ್ನು ನಿರ್ಧರಿಸಲು ರಾಜಸ್ಥಾನ ಕಾಂಗ್ರೆಸ್ ಬುಧವಾರ ಜೈಪುರದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸಲಿದೆ. ‘‘ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಬುಧವಾರ ನಡೆಯಲಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸಭೆಗೆ ಆಗಮಿಸಲಿದ್ದಾರೆ.’’ ಎಂದು ರಾಜ್ಯ ಕಾಂಗ್ರೆಸ್ ವರಿಷ್ಠ ಸಚಿನ್ ಪೈಲೆಟ್ ತಿಳಿಸಿದ್ದಾರೆ.

ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಕಾಂಗ್ರೆಸ್ ಮುಖ್ಯಮಂತ್ರಿ ಹುದ್ದೆಯ ಆಯ್ಕೆಯನ್ನು ಪ್ರಕಟಿಸುವ ಸಾಧ್ಯತೆ ಇದೆ. ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹಾಗೂ ಪೈಲೆಟ್ ಮುಖ್ಯಮಂತ್ರಿ ಹುದ್ದೆಯ ಹೆಸರಿನಲ್ಲಿ ಮುಂಚೂಣಿಯಲ್ಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News