ಬೆಂಗಳೂರು: ಲೋಕಾಯುಕ್ತ ಕಚೇರಿಯಲ್ಲಿ ಅಗ್ನಿ ಅವಘಡ

Update: 2018-12-12 14:09 GMT

ಬೆಂಗಳೂರು, ಡಿ.12: ಶಾರ್ಟ್ ಸರ್ಕ್ಯೂಟ್‌ನಿಂದಾಗಿ ನಗರದ ಲೋಕಾಯುಕ್ತ ಕಚೇರಿಯಲ್ಲಿಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.

ಲೋಕಾಯುಕ್ತ ಕಚೇರಿಯ ಎರಡನೇ ಮಹಡಿಯಲ್ಲಿ ಬೆಳಗ್ಗೆ ಕೆಲಸಕ್ಕೆ ಬಂದ ಸಿಬ್ಬಂದಿ ಫ್ಯಾನ್ ಸ್ವಿಚ್ ಹಾಕಿದ ಸಂದರ್ಭದಲ್ಲಿ ಆಕಸ್ಮಿಕವಾಗಿ ಶಾರ್ಟ್ ಸರ್ಕ್ಯೂಟ್ ಆಗಿದೆ. ಈ ವೇಳೆ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಬೆಂಕಿಯನ್ನು ನಂದಿಸಿದ ಪರಿಣಾಮ ಹೆಚ್ಚಿನ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News