ಸುಂಟಿಕೊಪ್ಪ: ಚೆಸ್ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Update: 2018-12-12 14:42 GMT

ಸುಂಟಿಕೊಪ್ಪ,ಡಿ.12: ಫಾತಿಮಾ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ರಜತ್ ಗುರುರಾಜ್ ಹಾಗೂ ಮಾನಸ ನಾರಾಯಣ್ ಅವರು ಚೆಸ್ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 

ಇತ್ತೀಚೆಗೆ ರಾಜ್ಯ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಕುಶಾಲನಗರ ಫಾತಿಮಾ ಹಿರಿಯ ಪ್ರಾಥಮಿಕ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಪಾಲ್ಗೊಂಡು 4ನೇ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು, ಮಹಾರಾಷ್ಟ್ರದ ದಾದ್ರ ಹವೇಲಿಯಲ್ಲಿ ಆರಂಭಗೊಂಡಿರುವ ರಾಷ್ಟ್ರಮಟ್ಟದ ಚೆಸ್ ಪಂದ್ಯಾವಳಿಗೆ ಪಾಲ್ಗೊಳ್ಳಲು ವಿದ್ಯಾರ್ಥಿಗಳು ತೆರಳಿದ್ದಾರೆ. 

ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾದ್ಯಾಯರು ಹಾಗೂ ಶಿಕ್ಷಕ ವೃಂದದವರು ಇವರ ಸಾಧನೆಯನ್ನು ಶ್ಲಾಘಿಸಿ ಅಭಿನಂದಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News