ಸರಕಾರಿ ಮೌಲಾನಾ ಅಝಾದ್ ಶಾಲೆಗಳ ಕುರಿತು ರಾಜ್ಯಾದ್ಯಂತ ವ್ಯಾಪಕ ಪ್ರಚಾರ: ಸಚಿವ ಝಮೀರ್

Update: 2018-12-12 15:25 GMT

ಬೆಳಗಾವಿ, ಡಿ.11: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ನಡೆಯುತ್ತಿರುವ ಸರಕಾರಿ ಮೌಲಾನಾ ಅಝಾದ್ ಶಾಲೆಗಳ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಪ್ರಚಾರ ಮಾಡುವ ಮೂಲಕ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣವನ್ನು ಹೆಚ್ಚಿಸಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಬಿ.ಝೆಡ್.ಝಮೀರ್ ಅಹ್ಮದ್ ಖಾನ್ ತಿಳಿಸಿದರು.

ಬುಧವಾರ ವಿಧಾನ ಸಭೆಯಲ್ಲಿ ಶಾಸಕ ತನ್ವೀರ್ ಸೇಠ್‍ ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು, 2018-19ನೆ ಸಾಲಿನಲ್ಲಿ 100 ಮೌಲಾನಾ ಅಝಾದ್ ಶಾಲೆಗಳನ್ನು ಪ್ರಾರಂಭಿಸಲು ಆದೇಶಿಸಲಾಗಿದ್ದು, ಅದರಲ್ಲಿ, 97 ಶಾಲೆಗಳನ್ನು ಪ್ರಾರಂಭಿಸಲಾಗಿದೆ ಎಂದರು.

ರಾಜ್ಯಾದ್ಯಂತ ಒಟ್ಟು 197 ಶಾಲೆಗಳನ್ನು ಪ್ರಾರಂಭಿಸಿದ್ದು, ಈ ಶಾಲೆಗಳಲ್ಲಿ 10,145  ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಸಂಖ್ಯೆಯನ್ನು ಹೆಚ್ಚಿಸುವ ಸಲುವಾಗಿ ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಈಗಾಗಲೆ ಮೌಲಾನಾ ಅಝಾದ್ ಶಾಲೆಗಳ ವಿದ್ಯಾರ್ಥಿಗಳಿಗೆ ಪ್ರತಿ ಶೈಕ್ಷಣಿಕ ವರ್ಷದ ಪ್ರಾರಂಭದಲ್ಲೆ ಉಚಿತವಾಗಿ ಪಠ್ಯಪುಸ್ತಕ, ಸಮವಸ್ತ್ರ, ನೋಟ್ ಪುಸ್ತಕ, ಲೇಖನ ಸಾಮಗ್ರಿ, ಶೂ ಮತ್ತು ಮಧ್ಯಾಹ್ನದ ಉಪಹಾರವನ್ನು ನೀಡಲಾಗುತ್ತಿದೆ. ಇನ್ನು ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಲು ಸರಕಾರ ಸಿದ್ದವಿದೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News