ಮಧ್ಯಪ್ರದೇಶದಲ್ಲಿ ಸರಕಾರ ರಚನೆ ಎಸ್‌ಪಿಯಿಂದ ಕಾಂಗ್ರೆಸ್‌ಗೆ ಬೆಂಬಲ

Update: 2018-12-12 16:15 GMT

ಹೊಸದಿಲ್ಲಿ, ಡಿ. 12: ಮಧ್ಯಪ್ರದೇಶದಲ್ಲಿ ಸರಕಾರ ರಚಿಸಲು ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್‌ಗೆ ಬಿಎಸ್‌ಪಿ ಬೆಂಬಲ ಘೋಷಿಸಿದ ಬಳಿಕ ಸಮಾಜವಾದಿ ಪಕ್ಷ ಕೂಡ ಬುಧವಾರ ತನ್ನ ಬೆಂಬಲ ಪ್ರಕಟಿಸಿದೆ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರಕಾರ ರೂಪಿಸಲು ಬಹುಜನ ಸಮಾಜ ಪಕ್ಷದ ವರಿಷ್ಠೆ ಮಾಯಾವತಿ ಬೆಂಬಲ ಘೋಷಿಸಿದ ಗಂಟೆ ಒಳಗಡೆ ಸಮಾಜವಾದಿ ಪಕ್ಷದ ವರಿಷ್ಠ ಅಖಿಲೇಶ್ ಯಾದವ್ ಬೆಂಬಲ ಪ್ರಕಟಿಸಿದ್ದಾರೆ.

ಮಧ್ಯಪ್ರದೇಶದಲ್ಲಿ ಸರಕಾರ ರಚಿಸಲು ಕಾಂಗ್ರೆಸ್‌ಗೆ ಎಸ್‌ಪಿ ಬೆಂಬಲ ನೀಡಲಿದೆ ಎಂದು ಅಖಿಲೇಶ್ ಯಾದವ್ ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಮಧ್ಯಪ್ರದೇಶದ ವಿಧಾನ ಸಭೆಯಯ ಚುನಾವಣೆ ಸಮರದಲ್ಲಿ ಬಿಜೆಪಿಯನ್ನು ಎದುರಿಸಿದ ಕಾಂಗ್ರೆಸ್ 114 ಸ್ಥಾನಗಳೊಂದಿಗೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿುದೆ. 230 ಸ್ಥಾನಗಳಿರುವ ಮಧ್ಯಪ್ರದೇಶ ವಿಧಾನ ಸಭೆಯಲ್ಲಿ ಸರಳ ಬಹುಮತ ಪಡೆಯಲು ಕಾಂಗ್ರೆಸ್‌ಗೆ 116 ಸ್ಥಾನಗಳು ಬೇಕು. ಆದರೆ, ಕಾಂಗ್ರೆಸ್‌ಗೆ ಎರಡು ಸ್ಥಾನಗಳ ಕೊರತೆ ಇದೆ. 109 ಸ್ಥಾನಗಳನ್ನು ಪಡೆದುಕೊಂಡಿರುವ ಬಿಜೆಪಿ ಕಾಂಗ್ರೆಸ್ ನಂತರ ಅತ್ಯಧಿಕ ಸ್ಥಾನಗಳನ್ನು ಪಡೆದುಕೊಂಡಿರುವ ಪಕ್ಷ. ಬಹುಜನ ಸಮಾಜ ಪಕ್ಷ 2, ಸಮಾಜವಾದಿ ಪಕ್ಷ 1 ಹಾಗೂ ಸ್ವತಂತ್ರ ಪಕ್ಷಗಳು 4 ಸ್ಥಾನಗಳನ್ನು ಪಡೆದುಕೊಂಡಿದ್ದವು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News