ಅಪರಾಧ ಪ್ರಕರಣ ತಡೆಗಟ್ಟಲು ಎಲ್ಲರ ಸಹಕಾರ ಅಗತ್ಯ: ಪೊಲೀಸ್ ಉಪನಿರೀಕ್ಷಕ ರಾಘವೇಂದ್ರ ಸಿ.

Update: 2018-12-12 16:37 GMT

ಬ್ರಹ್ಮಾವರ, ಡಿ.12: ಸಮಾಜದಲ್ಲಿ ದಿನೇ ದಿನೇ ಹೆಚ್ಚುತಿತಿರುವ ಅಪರಾಧ ಪ್ರಕರಣಗಳ್ನು ತಡೆಗಟ್ಟಲು ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಕೆಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಇದರೊಂದಿಗೆ ಅವರಿಗೆ ಸ್ವಲ್ಪಮಟ್ಟಿಗಾದರೂ ಕಾನೂನಿನ ಬಗ್ಗೆ ಅರಿವು ಇರಬೇಕು ಎಂದು ಬ್ರಹ್ಮಾವರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ರಾಘವೇಂದ್ರ ಸಿ. ವಿದ್ಯಾರ್ಥಿ ಗಳನ್ನುದ್ದೇಶಿಸಿ ಹೇಳಿದ್ದಾರೆ.

ಬ್ರಹ್ಮಾವರದ ಕ್ರಾಸ್‌ಲ್ಯಾಂಡ್ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಉಡುಪಿ ಜಿಲ್ಲಾ ಪೊಲೀಸ್ ಬ್ರಹ್ಮಾವರ ವೃತ್ತದ ಸಹಯೋಗದಲ್ಲಿ ನಡೆದ ಅಪರಾಧತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತಿದ್ದರು.

ಅಫಘಾತವಾಗುವುದು ಆಕಸ್ಮಿಕವಾದರೂ ಅದು ಕೂಡಾ ಒಂದು ಅಪರಾಧವೇ. ಪರಿಸರದಲ್ಲಿ ಮಾದಕವಸ್ತು, ಲೈಂಗಿಕ ಶೋಷಣೆ, ಕಳ್ಳತನ ಮುಂತಾದ ವ್ಯವಹಾರಗಳು ಕಂಡು ಬಂದಲ್ಲಿ ಪೊಲೀಸರಿಗೆ ತಿಳಿಸಿ ಅಪರಾಧ ತಡೆಯುವ ಪ್ರಯತ್ನ ಮಾಡಿ ಅಪರಾಧ ಮುಕ್ತ ಸಮಾಜ ನಿರ್ಮಾಣ ಮಾಡುವ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ವಿದ್ಯಾರ್ಥಿಗಳು ಮತ್ತು ವಾಹನ ಸವಾರರು ಟ್ರಾಫಿಕ್ ನಿಯಮಗಳನ್ನು ತಿಳಿದು ಕೊಂಡು ವಾಹನ ಚಲಾಯಿಸಿದಲ್ಲಿ ಸಮಸ್ಯೆಗಳು ಉದ್ಭವಿಸುವುದಿಲ್ಲ. ಆದರೆ ಇಂದು ನಿಯಮಗಳನ್ನು ಗಾಳಿಗೆ ತೂರಿ ಸಮಸ್ಯೆಗಳನ್ನು ತಂದುಕೊಳ್ಳುವುದೇ ಹೆಚ್ಚು ಎಂದವರು ನುಡಿದರು.

ಕಾರ್ಯಕ್ರಮದಲ್ಲಿ ಎಎಸ್‌ಐ ಸುಂದರ್, ಹೆಡ್‌ಕಾನ್ಸ್‌ಟೇಬಲ್ ಸತೀಶ್, ಉಪಪ್ರಾಂಶುಪಾಲ ಶೇಷಗಿರಿ ಭಟ್ ಉಪಸ್ಥಿತರಿದ್ದರು. ಉಪನ್ಯಾಸಕ ನವೀನ್ ಕುಮಾರ್ ಶೆಟ್ಟಿ ಸ್ವಾಗತಿಸಿ ಉಪನ್ಯಾಸಕಿ ಸ್ಮಿತಾ ಮೈಪಾಡಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News