ಕಾಶ್ಮೀರದಲ್ಲಿ ಪಾಕಿಸ್ತಾನ ಭಾರತದ ಭೂಭಾಗವನ್ನು ಸ್ವಾಧೀನಪಡಿಸಿಕೊಳ್ಳುತ್ತಿದೆ: ಸುಶ್ಮಾ ಸ್ವರಾಜ್

Update: 2018-12-12 16:51 GMT

ಹೊಸದಿಲ್ಲಿ,ಡಿ.12: ಪಾಕಿಸ್ತಾನ ಕಾನೂನುಬಾಹಿರವಾಗಿ ಸ್ವಾಧೀನಪಡಿಸಿಕೊಂಡಿರುವ ಭಾರತದ ಭೂಭಾಗವನ್ನು ತೆರವುಗೊಳಿಸುವಂತೆ ಪದೇಪದೇ ಸೂಚಿಸುತ್ತಿದೆ. ಕಳೆದ ತಿಂಗಳೂ ಭಾರತದ ಪಾಕಿಸ್ತಾನಕ್ಕೆ ಈ ಬಗ್ಗೆ ಎಚ್ಚರಿಕೆ ನೀಡಿದೆ ಎಂದು ಕೇಂದ್ರ ಸರಕಾರ ಬುಧವಾರ ತಿಳಿಸಿದೆ.

ಲೋಕಸಭೆಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ವಿದೇಶಾಂಗ ವ್ಯವಹಾರಗಳ ಸಚಿವೆ ಸುಶ್ಮಾ ಸ್ವರಾಜ್, ಜಮ್ಮು ಮತ್ತು ಕಾಶ್ಮೀರವು ಭಾರತದ ಅವಿಭಾಜ್ಯ ಅಂಗವಾಗಿತ್ತು, ಇದೆ ಮತ್ತು ಮುಂದೆಯೂ ಇರಲಿದೆ ಎನ್ನುವುದು ಭಾರತದ ಖಚಿತ ನಿಲುವಾಗಿದೆ ಎಂದು ತಿಳಿಸಿದ್ದಾರೆ. ಪಾಕಿಸ್ತಾನವು ಅಂದಾಜು 78,000 ಚದರ ಕಿ.ಮೀ ಭಾರತದ ಭೂಭಾಗವನ್ನು ಅಕ್ರಮವಾಗಿ ಸ್ವಾಧೀನಪಡಿಸಿಕೊಂಡಿದೆ ಎಂದು ಅವರು ತಿಳಿಸಿದ್ದಾರೆ.

1963ರ ಮಾರ್ಚ್ 2ರಂದು ಚೀನಾ ಮತ್ತು ಪಾಕಿಸ್ತಾನ ಸಹಿ ಹಾಕಿರುವ ಬೌಂಡರಿ ಒಪ್ಪಂದದಡಿಯಲ್ಲಿ ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತದ ಭೂಭಾಗದ 5,180 ಚ.ಕಿ.ಮೀ ಅನ್ನು ಚೀನಾಗೆ ನೀಡಿದೆ ಎಂದು ಸ್ವರಾಜ್ ಆರೋಪಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News