ಹನೂರು: ನೇಣು ಬಿಗಿದು ರೈತ ಆತ್ಮಹತ್ಯೆ

Update: 2018-12-12 17:44 GMT

ಹನೂರು,ಡಿ.12: ಸಾಲಭಾದೆ ಹಾಗೂ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ ರೈತರೊಬ್ಬರು ಜಮೀನಿನಲ್ಲಿದ್ದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ. 

ಕಾಮಗೆರೆ ಗ್ರಾಮದ ರಾಯಪ್ಪ (50) ಮೃತ ರೈತ. ಇವರು ಗ್ರಾಮದ ಹೊರವಲಯದಲ್ಲಿ ಜಮೀನನ್ನು ಹೊಂದಿದ್ದು, ಕೃಷಿಗೆ ಸಂಬಂಧಿಸಿದಂತೆ ಬ್ಯಾಂಕ್ ಹಾಗೂ ಸಂಘಸಂಸ್ಥೆಯಿಂದ ಸಾಲವನ್ನು ಪಡೆದಿದ್ದರು. ಪಡೆದ ಸಾಲ ತೀರಿಸಲಾಗದೆ ಚಿಂತೆಗೀಡಾಗಿದ್ದರಲ್ಲದೇ, ಕಳೆದ 2-3 ವರ್ಷಗಳಿಂದ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದರು. ಇದರಿಂದ ಜಿಗುಪ್ಸೆಗೊಂಡು ಬುಧವಾರ ಮಧ್ಯಾಹ್ನ ಜಮೀನಲ್ಲಿದ್ದ ಮರಕ್ಕೆ ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. 

ಸ್ಥಳಕ್ಕಾಗಮಿಸಿದ ಪೋಲಿಸರು ಪರಿಶೀಲನೆ ನಡೆಸಿದರು. ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಮೃತದೇಹವನ್ನು ನೀಡಲಾಯಿತು. ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News