ಎರಡನೇ ಟೆಸ್ಟ್: ಅಶ್ವಿನ್, ಶಾ, ರೋಹಿತ್ ಅಲಭ್ಯ

Update: 2018-12-13 04:50 GMT

 ಪರ್ತ್, ಡಿ.13: ಟೀಮ್ ಇಂಡಿಯಾಕ್ಕೆ ಎರಡನೇ ಟೆಸ್ಟ್ ಆರಂಭಕ್ಕೆ ಮೊದಲೇ ತೀವ್ರ ಹಿನ್ನಡೆಯಾಗಿದೆ. ತಂಡದ ಸದಸ್ಯರಾದ ಆರ್.ಅಶ್ವಿನ್, ರೋಹಿತ್ ಶರ್ಮಾ ಹಾಗೂ ಪೃಥ್ವಿ ಶಾ ಗಾಯದ ಸಮಸ್ಯೆಯಿಂದಾಗಿ ಆಡುವ 11ರ ಬಳಗದಿಂದ ಹೊರಗುಳಿದಿದ್ದಾರೆ.

ಎರಡನೇ ಟೆಸ್ಟ್ ಡಿ.14, ಶುಕ್ರವಾರದಿಂದ ಆರಂಭವಾಗಲಿದೆ. ಬಿಸಿಸಿಐ ಗುರುವಾರ 13 ಆಟಗಾರರ ಹೆಸರನ್ನು ಪ್ರಕಟಿಸಿದ್ದು, ಉಮೇಶ್ ಯಾದವ್ ಹಾಗೂ ಭುವನೇಶ್ವರ ಕುಮಾರ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಅಶ್ವಿನ್ ಮೊದಲ ಟೆಸ್ಟ್‌ನಲ್ಲಿ ಉತ್ತಮ ಪ್ರದರ್ಶನದಿಂದ ತಂಡದ ಗೆಲುವಿಗೆ ನೆರವಾಗಿದ್ದರು. ಆದರೆ, ರೋಹಿತ್ ಶರ್ಮಾ ತನಗೆ ಲಭಿಸಿದ್ದ ಅವಕಾಶ ಬಳಸಿಕೊಳ್ಳಲು ವಿಫಲರಾಗಿದ್ದರು. ಶಾ ಗಾಯದ ಸಮಸ್ಯೆಯಿಂದಾಗಿ ಮೊದಲ ಟೆಸ್ಟ್‌ನಲ್ಲಿ ಆಡಿರಲಿಲ್ಲ.

19ರ ಹರೆಯದ ಶಾ ಸಿಡ್ನಿಯಲ್ಲಿ ನಡೆದ ಕ್ರಿಕೆಟ್ ಆಸ್ಟ್ರೇಲಿಯ ವಿರುದ್ಧದ ಅಭ್ಯಾಸದ ಪಂದ್ಯದ ವೇಳೆಯೇ ಡೀಪ್ ಮಿಡ್-ವಿಕೆಟ್ ಬೌಂಡರಿಯಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ವೇಳೆ ಕ್ಯಾಚ್ ತೆಗೆದುಕೊಳ್ಳುವ ಪ್ರಯತ್ನದಲ್ಲಿದ್ದಾಗ ಮೊಣಕಾಲುನೋವಿಗೆ ಒಳಗಾಗಿದ್ದರು.

2ನೇ ಟೆಸ್ಟ್‌ಗೆ ಭಾರತ ತಂಡ

ವಿರಾಟ್ ಕೊಹ್ಲಿ(ನಾಯಕ), ಮುರಳಿ ವಿಜಯ್, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ(ಉಪ ನಾಯಕ), ಹನುಮ ವಿಹಾರಿ, ರಿಷಭ್ ಪಂತ್(ವಿಕೆಟ್‌ಕೀಪರ್), ರವೀಂದ್ರ ಜಡೇಜ, ಇಶಾಂತ್ ಶರ್ಮಾ, ಮುಹಮ್ಮದ್ ಶಮಿ, ಜಸ್‌ಪ್ರಿತ್ ಬುಮ್ರಾ, ಭುವನೇಶ್ವರ ಕುಮಾರ್, ಉಮೇಶ್ ಯಾದವ್.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News