ರಾಜಸ್ಥಾನ ಸಿಎಂ ಆಗಿ ಅಶೋಕ್ ಗೆಹ್ಲೋಟ್, ಮಧ್ಯಪ್ರದೇಶಕ್ಕೆ ಕಮಲ್ ನಾಥ್ ಆಯ್ಕೆ ಬಹುತೇಕ ಖಚಿತ

Update: 2018-12-13 10:04 GMT
ಕಮಲ್ ನಾಥ್                   ಗೆಹ್ಲೋಟ್

ಹೊಸದಿಲ್ಲಿ, ಡಿ.13: ವಿಧಾನಸಭಾ ಚುನಾವಣೆಯ ವಿಜಯದ ನಂತರ ರಾಜಸ್ಥಾನದ ಮುಖ್ಯಮಂತ್ರಿಯಾಗಿ 3ನೆ ಬಾರಿಗೆ ಅಶೋಕ್ ಗೆಹ್ಲೋಟ್ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ಬಗ್ಗೆ ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ. ಇಂದು ದಿಲ್ಲಿಯಲ್ಲಿ ಅಶೋಕ್ ಗೆಹ್ಲೋಟ್ ಹಾಗು ಸಚಿನ್ ಪೈಲಟ್ ರನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿಯಾಗಿದ್ದರು.

2013ರಲ್ಲಿ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲನುಭವಿಸಿದ್ದ ನಂತರ ಸಚಿನ್ ಪೈಲಟ್ ರಾಜ್ಯ ಕಾಂಗ್ರೆಸ್ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದರು. ಈ ಬಾರಿಯ ಚುನಾವಣಾ ಪ್ರಚಾರಕ್ಕಾಗಿ ಅವರು 5 ಲಕ್ಷ ಕಿ.ಮೀ. ಪ್ರವಾಸ ಕೈಗೊಂಡಿದ್ದರು. ಸಿಎಂ ಹುದ್ದೆಗೆ ಈ ಇಬ್ಬರ ನಡುವೆ ತೀವ್ರ ಪೈಪೋಟಿ ಇತ್ತಾದರೂ ಅಶೋಕ್ ಗೆಹ್ಲೋಟ್ ರನ್ನು ರಾಹುಲ್ ಗಾಂಧಿ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿರುವುದಾಗಿ ಎನ್ ಡಿಟಿವಿ ವರದಿ ಮಾಡಿದೆ.

ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್ ನ ಹಿರಿಯ ನಾಯಕ ಕಮಲ್ ನಾಥ್ ಮುಖ್ಯಮಂತ್ರಿಯಾಗಿ ಆಯ್ಕೆಯಾಗಲಿದ್ದಾರೆ ಎಂದು ವರದಿಯಾಗಿದೆ. ಈ ರಾಜ್ಯದಲ್ಲಿ ಸಿಎಂ ರೇಸ್ ನಲ್ಲಿರುವ ಮತ್ತೋರ್ವ ಆಕಾಂಕ್ಷಿ ಜ್ಯೋತಿರಾದಿತ್ಯ ಸಿಂಧಿಯಾ.

ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿದ್ದ ಸಿಂಧಿಯಾ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಲಿದ್ದಾರೆ ಎನ್ನಲಾಗಿದ್ದು, ಇಲ್ಲೂ ಕೂಡ ಅಧಿಕೃತ ಘೋಷಣೆ ಇನ್ನಷ್ಟೇ ಹೊರಬೀಳಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News