ಸಲಿಂಗಕಾಮಕ್ಕೆ ಆಹ್ವಾನಿಸಿ ಚಿನ್ನಾಭರಣ ದರೋಡೆ: ಬಂಧನ

Update: 2018-12-13 16:41 GMT

ಬೆಂಗಳೂರು,ಡಿ.13: ನಗರದಲ್ಲಿ ಸಲಿಂಗ ಕಾಮಕ್ಕೆ ಆಹ್ವಾನಿಸಿ ಚಿನ್ನ ಹಾಗೂ ಬೆಲೆಬಾಳುವ ವಸ್ತುಗಳನ್ನು ದೋಚುತ್ತಿದ್ದ ಗ್ಯಾಂಗ್‌ಅನ್ನು ಮೈಕೋ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ಥ್ರೂತ್ ಪಾಯಿಂಟ್ ಎನ್ನುವ ವೆಬ್‌ಸೈಟ್ ಮೂಲಕ ಸಲಿಂಗ ಕಾಮಿಗಳನ್ನು ಆಹ್ವಾನಿಸುತ್ತಿದ್ದರು. ಸಲಿಂಗ ಕಾಮದಲ್ಲಿ ಆಸಕ್ತಿಯುಳ್ಳವರು ಅವರು ಕರೆದ ವಿಳಾಸಕ್ಕೆ ಹೋಗುತ್ತಿದ್ದರು. ಅಲ್ಲಿಗೆ ಬಂದ ಸಲಿಂಗಕಾಮಿಗಳ ಮೇಲೆ ಹಲ್ಲೆ ನಡೆಸಿ ಬೆದರಿಸಿ ಚಿನ್ನಾಭರಣವನ್ನು ದೋಚುತ್ತಿದ್ದರು. ಅಲ್ಲದೇ ವಿಡಿಯೋ ಮಾಡಿದ್ದೀವಿ, ಹಣ ಕೊಡು ಎಂದು ಪೀಡಿಸಿ ಅವರ ಚಿನ್ನಾಭರಣವನ್ನು ಕಿತ್ತುಕೊಂಡು ಕಳಿಸುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News