ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಹಿರಿಯ ಕಾಂಗ್ರೆಸ್ಸಿಗ ಕಮಲ್ ನಾಥ್ ಆಯ್ಕೆ

Update: 2018-12-13 18:01 GMT

ಹೊಸದಿಲ್ಲಿ, ಡಿ.13: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ವಿಜಯದ ಬಳಿಕ ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ ಪಕ್ಷದ ರಾಜ್ಯಾಧ್ಯಕ್ಷ, ಹಿರಿಯ ನಾಯಕ  ಕಮಲ್ ನಾಥ್ ಆಯ್ಕೆಯಾಗಿದ್ದಾರೆ. ಚುನಾವಣಾ ಫಲಿತಾಂಶದ ಬಳಿಕ ತೀವ್ರ ಕುತೂಹಲ ಕೆರಳಿಸಿದ್ದ ಸಿಎಂ ರೇಸ್ ಗೆ ಈ ಮೂಲಕ ಕೊನೆಗೂ ತೆರೆಬಿದ್ದಿದೆ.

ಗುರುವಾರ ರಾತ್ರಿ ಭೋಪಾಲ್ ನಲ್ಲಿ ನಡೆದ ಪಕ್ಷದ  ಶಾಸಕಾಂಗ ಪಕ್ಷದ ಸಭೆಯಲ್ಲಿ ಕಮಲ್ ನಾಥ್ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News