ರಫೇಲ್ ಒಪ್ಪಂದ ತನಿಖೆಗೆ ಸುಪ್ರೀಂಕೋರ್ಟ್ ನಕಾರ

Update: 2018-12-14 07:27 GMT

ಹೊಸದಿಲ್ಲಿ, ಡಿ.14: ಫ್ರಾನ್ಸ್‌ನೊಂದಿಗೆ ಭಾರತದ ಮಲ್ಟಿ ಮಿಲಿಯನ್ ಡಾಲರ್ ಮೊತ್ತದ ರಫೇಲ್ ಯುದ್ದ ವಿಮಾನ ಖರೀದಿ ಒಪ್ಪಂದದ ತನಿಖೆ ನಡೆಸಬೇಕೆಂದು ಸಲ್ಲಿಸಿರುವ ಎಲ್ಲ ಅರ್ಜಿಗಳನ್ನು ಸುಪ್ರೀಂಕೋರ್ಟ್ ಇಂದು ತಿರಸ್ಕರಿಸಿದೆ. ಈ ಮೂಲಕ ಕೇಂದ್ರ ಸರಕಾರಕ್ಕೆ ನಿಟ್ಟುಸಿರುಬಿಡುವಂತೆ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಜಸ್ಟಿಸ್‌ಗಳಾದ ಸಂಜಯ್ ಕಿಶನ್ ಕೌಲ್ ಹಾಗೂ ಕೆಎಂ ಜೋಸೆಫ್ ಅವರನ್ನೊಳಗೊಂಡ ತ್ರಿಸದಸ್ಯ ನ್ಯಾಯಪೀಠ, ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಚಾರ, ಅವ್ಯವಹಾರ ತನಿಖೆಗೆ ಆಗ್ರಹಿಸಿ ಸಲ್ಲಿಸಿರುವ ಎಲ್ಲ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಜಾಗೊಳಿಸಿದೆ. ವಿಮಾನದ ಖರೀದಿ ಪ್ರಕ್ರಿಯೆ ಸರಿಯಾಗಿದೆ. ವಿಮಾನದ ಮೌಲ್ಯ, ಗುಣಮಟ್ಟದಲ್ಲಿ ಯಾವುದೇ ಸಂಶಯವಿಲ್ಲ. ರಫೇಲ್ ಯುದ್ದ ವಿಮಾನದ ಮೌಲ್ಯವನ್ನು ನೋಡುವುದು ಸುಪ್ರೀಂಕೋರ್ಟಿನ ಕೆಲಸವಲ್ಲ ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಅಭಿಪ್ರಾಯಪಟ್ಟಿದೆ.

ಸಿಜೆಐ ರಂಜನ್ ಗೊಗೋಯ್ ನೇತೃತ್ವದ ಪೀಠ ನ.14 ರಂದು ರಫೇಲ್ ಪ್ರಕರಣಕ್ಕೆ ಸಂಬಂಧಿಸಿದ ಅಂತಿಮ ತೀರ್ಪನ್ನು ಕಾಯ್ದಿರಿಸಿತ್ತು.

ಕೇಂದ್ರ ಸರಕಾರ ಮಲ್ಟಿ ಮಿಲಿಯನ್ ಡಾಲರ್ ಮೊತ್ತದ 36 ರಫೇಲ್ ಯುದ್ದ ವಿಮಾನ ಖರೀದಿ ಒಪ್ಪಂದವನ್ನು ಸಮರ್ಥಿಸಿಕೊಂಡಿದ್ದು, ಖರೀದಿ ಒಪ್ಪಂದದ ಮೌಲ್ಯಗಳ ವಿವರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ವಾದಿಸಿತ್ತು. ಕೇಂದ್ರದ ವಾದವನ್ನು ಇದೀಗ ಸುಪ್ರೀಂ ಒಪ್ಪಿಕೊಂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News