ಅಕ್ರಮ ಕಲ್ಲಿದ್ದಲು ಗಣಿಗೆ ನುಗ್ಗಿದ ನೀರು: ಕನಿಷ್ಠ 13 ಕಾರ್ಮಿಕರು ಮೃತಪಟ್ಟಿರುವ ಶಂಕೆ

Update: 2018-12-14 06:35 GMT

 ಗುವಾಹಟಿ, ಡಿ.14: ಮೇಘಾಲಯದ ಪೂರ್ವ ಜೈಂಟಿಯಾ ಹಿಲ್ಸ್ ಜಿಲ್ಲೆಯಲ್ಲಿ ಗುರುವಾರ ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ನೀರು ನುಗ್ಗಿದ ಪರಿಣಾಮ ಕನಿಷ್ಠ 13 ಕಾರ್ಮಿಕರು ಸಿಲುಕಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಗಣಿಯೊಳಗೆ ತುಂಬಿರುವ ಪ್ರವಾಹದ ನೀರನ್ನು ಹೊರ ತೆಗೆಯಲಾಗುತ್ತಿದೆ. ಗಣಿ ಕಾರ್ಮಿಕರ ಗುರುತನ್ನು ಪತ್ತೆ ಹಚ್ಚುವ ಪ್ರಯತ್ನವೂ ಮುಂದುವರಿದಿದೆ.

ಗುರುವಾರ ಬೆಳಗ್ಗೆ ಜಿಲ್ಲಾಡಳಿತವು ಘಟನೆಯ ಬಗ್ಗೆ ಮಾಹಿತಿ ನೀಡಿದೆ. ‘‘ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ತಂಡಗಳು ರಕ್ಷಣಾಕಾರ್ಯಾಚರಣೆ ಆರಂಭಿಸಿವೆ. ನಾವು ಗಣಿ ಮಾಲಕರ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಂಡಿದ್ದೇವೆ. ಇದು ಅತ್ಯಂತ ಆಳವಾದ ಗಣಿಯಾಗಿದೆ’’ ಎಂದು ಪೊಲೀಸ್ ಅಧೀಕ್ಷಕ ನಾಂಗ್ಟೈಂಗರ್ ಹೇಳಿದ್ದಾರೆ.

ಹಿರಿಯ ಅಧಿಕಾರಿಗಳು ಗಣಿಯೊಳಗೆ ಸಿಲುಕಿರುವವರ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ. ಮೂಲಗಳ ಪ್ರಕಾರ, ಗಣಿಯೊಳಗೆ ನೀರು ನುಗ್ಗಿದ ಹಿನ್ನೆಲೆಯಲ್ಲಿ ಹಲವರು ಸಾವನ್ನಪ್ಪಿರುವ ಸಾಧ್ಯತೆಯಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News