ರಫೇಲ್ ಒಪ್ಪಂದ ಕುರಿತು ಜಂಟಿ ಸಂಸದೀಯ ಸಮಿತಿ ತನಿಖೆಗೆ ಆಗ್ರಹಿಸುತ್ತೇವೆ: ಕಾಂಗ್ರೆಸ್

Update: 2018-12-14 09:04 GMT

ಹೊಸದಿಲ್ಲಿ, ಡಿ.14: ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದದ ಕುರಿತಂತೆ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದ ಅಪೀಲುಗಳನ್ನು ಸುಪ್ರೀಂ ಕೋರ್ಟ್ ತಳ್ಳಿ ಹಾಕಿದ ಬೆನ್ನಲ್ಲೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಸರಕಾರ ಬೇಡಿಕೆಯಿಟ್ಟರೂ, ಕೋರ್ಟ್ ತೀರ್ಪು ಹಿನ್ನಡೆ ಅಲ್ಲವೇ ಅಲ್ಲ ಎಂದು ಕಾಂಗ್ರೆಸ್ ನಾಯಕತ್ವ ಹೇಳಿಕೊಂಡಿದೆ.

ರಫೇಲ್ ಒಪ್ಪಂದದ ಕುರಿತಂತೆ ಜಂಟಿ ಸಂಸದೀಯ ಸಮಿತಿ  ತನಿಖೆಗೆ ಆಗ್ರಹಿಸುವುದನ್ನು ಮುಂದುವರಿಸುವುದಾಗಿ ತಿಳಿಸಿದ ಕಾಂಗ್ರೆಸ್, ಒಪ್ಪಂದದ ಎಲ್ಲಾ ಅಂಶಗಳನ್ನು ಸುಪ್ರೀಂ ಕೋರ್ಟ್ ಪರಿಶೀಲಿಸಿಲ್ಲ ಎಂದು ಹೇಳಿದೆ.

``ಸರಕಾರವು ಸುಪ್ರೀಂ ಕೋರ್ಟಿಗೆ ಏಕಪಕ್ಷೀಯ ಹಾಗೂ ಅರ್ಧಂಬರ್ಧ ಮಾಹಿತಿ ನೀಡಿದೆ. ರಫೇಲ್ ವಿಚಾರವಾಗಿ ಸುಪ್ರೀಂ ಕೋರ್ಟ್ ತೀರ್ಮಾನಿಸಲು ಸಾಧ್ಯವಿಲ್ಲ, ಜಂಟಿ ಸಂಸದೀಯ ತನಿಖೆ ಮಾತ್ರ ಎಲ್ಲಾ ದಾಖಲೆಗಳನ್ನು ಪರಿಶೀಲಿಸಬಹುದೆಂದು ಕಾಂಗ್ರೆಸ್ ಈ ಹಿಂದೆಯೇ ಹೇಳಿತ್ತು'' ಎಂದು ಪಕ್ಷದ ವಕ್ತಾರ ರಣದೀಪ್ ಸುರ್ಜೇವಾಲ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News