ಡಿ.16: ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ

Update: 2018-12-14 12:54 GMT

ಮಂಗಳೂರು, ಡಿ.14: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್‌ಕ್ಲಬ್ ಮತ್ತು ಪತ್ರಿಕಾ ಭವನ ಟ್ರಸ್ಟ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟವು ನಗರದ ನೆಹರೂ ಮೈದಾನ ಪಕ್ಕದ ಫುಟ್ಬಾಲ್ ಕ್ರೀಡಾಂಗಣದಲ್ಲಿ ಡಿ.16ರಂದು ಜರಗಲಿದೆ.

 ಬೆಳಗ್ಗೆ ಗಂಟೆ 9 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಆರ್. ರವಿಕಾಂತೇ ಗೌಡ ಕ್ರೀಡಾಕೂಟವನ್ನು ಉದ್ಘಾಟಿಸುವರು.

ದ.ಕ.ಜಿಲ್ಲಾ ಅಪರ ಜಿಲ್ಲಾಧಿಕಾರಿ ಕುಮಾರ್ ಹಾಗೂ ಮನಪಾ ಆಯುಕ್ತ ಮುಹಮ್ಮದ್ ನಝೀರ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸುವರು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News