ಡಿ.15: ‘ಶಿಕ್ಷಣದಲ್ಲಿ ಪೋಷಕರ ಪಾತ್ರ’ ವಿಶೇಷ ಉಪನ್ಯಾಸ

Update: 2018-12-14 12:55 GMT

ಮಂಗಳೂರು, ಡಿ.14: ಶಕ್ತಿ ವಸತಿಯುಕ್ತ ಶಾಲೆ ಹಾಗೂ ಶಕ್ತಿ ಕಾಲೇಜಿನ ವತಿಯಿಂದ ಡಿ.15ರಂದು ಬೆಳಗ್ಗೆ 11 ಗಂಟೆಗೆ ಶಕ್ತಿ ಶಿಕ್ಷಣ ಸಂಸ್ಥೆಯಲ್ಲಿ ‘ಶಿಕ್ಷಣದಲ್ಲಿ ಪೋಷಕರ ಪಾತ್ರ’ ಎಂಬ ವಿಷಯದ ಕುರಿತಂತೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಈ ವಿಶೇಷ ಉಪನ್ಯಾಸವನ್ನು ಡಾ.ವಿರೂಪಾಕ್ಷ ದೇವರಮನೆ, ಡಾ.ಎ.ವಿ.ಬಾಳಿಗಾ ಮೆಮೋರಿಯಲ್ ಆಸ್ಪತ್ರೆ ಉಡುಪಿಯ ಖ್ಯಾತ ಮನಶಾಸ್ತ್ರಜ್ಞ ನಡೆಸಿ ಕೊಡಲಿದ್ದಾರೆ. ಕಾರ್ಯಕ್ರಮದಲ್ಲಿ ಶಕ್ತಿ ಶಿಕ್ಷಣ ಸಂಸ್ಥೆಯ ಎಲ್ಲ ವಿದ್ಯಾರ್ಥಿಗಳ ಪೋಷಕರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅದ್ಯಕ್ಷತೆಯನ್ನು ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಸಿ ನಾಕ್ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಶಕ್ತಿ ವಸತಿಯುಕ್ತ ಶಾಲೆಯ ಪ್ರಾಂಶುಪಾಲ ವಿದ್ಯಾ ಕಾಮತ್, ಶಕ್ತಿ ಪಪೂ ಕಾಲೇಜಿನ ಪ್ರಾಂಶುಪಾಲ ಪ್ರಭಾಕರ ಜಿ.ಎಸ್., ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್, ಪ್ರಧಾನ ಸಲಹೆಗಾರ ರಮೇಶ್ ಕೆ. ಮತ್ತು ಅಭಿವೃದ್ಧಿ ಅಧಿಕಾರಿ ನಸೀಮಾಬಾನು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News