ದೇವಸ್ಥಾನದ ಪ್ರಸಾದ ಸೇವಿಸಿ ಹಲವರ ಸಾವು ಪ್ರಕರಣ: ಸಿಎಂ ಕುಮಾರಸ್ವಾಮಿ ಆಸ್ಪತ್ರೆಗೆ ಭೇಟಿ

Update: 2018-12-14 16:51 GMT

ಬೆಂಗಳೂರು, ಡಿ.14: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶುಕ್ರವಾರ ಸಂಜೆ ಚೆನ್ನೈನಿಂದ ವಾಪಸಾದ ತಕ್ಷಣ ವಿಮಾನ ನಿಲ್ದಾಣದಲ್ಲಿಯೇ ಚಾಮರಾಜನಗರ ಜಿಲ್ಲೆಯ ಸುಲ್ವಾಡಿ ಗ್ರಾಮದ ಘಟನೆಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಪರಿಹಾರ ಘೋಷಿಸಿದರು.

ಬಳಿಕ ಮುಖ್ಯಮಂತ್ರಿಗಳು ವಿಶೇಷ ವಿಮಾನದಲ್ಲಿ ಮೈಸೂರಿಗೆ ತೆರಳಿ ಕೆ.ಆರ್.ಆಸ್ಪತ್ರೆ ಹಾಗೂ ಜೆಎಸ್‌ಎಸ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಅಸ್ವಸ್ಥರನ್ನು ಭೇಟಿ ಮಾಡಿದರು. ಮೈಸೂರಿನಿಂದ 15 ಅಂಬ್ಯುಲೆನ್ಸ್‌ಗಳನ್ನು ಘಟನಾ ಸ್ಥಳಕ್ಕೆ ಕಳುಹಿಸಲಾಗಿದೆ. ಈ ಘಟನೆಯಲ್ಲಿ ಅಸ್ವಸ್ಥಗೊಂಡವರ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸುವಂತೆ ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಘಟನೆಯ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News