ಡಿಸೆಂಬರ್ 17ರಂದು ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ ಕಮಲ್‌ ನಾಥ್ ಪ್ರಮಾಣ ವಚನ ಸ್ವೀಕಾರ

Update: 2018-12-14 17:00 GMT

 ಭೋಪಾಲ, ಡಿ. 12: ಕಾಂಗ್ರೆಸ್ ನಾಯಕ ಕಮಲ್‌ನಾಥ್ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಡಿಸೆಂಬರ್ 17ರಂದು ಲಾಲ್ ಪರೇಡ್ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ರಾಜ್ಯದಲ್ಲಿ ನೂತನವಾಗಿ ಆಯ್ಕೆಯಾದ ಕಾಂಗ್ರೆಸ್ ಸರಕಾರಕ್ಕೆ ಮುಖ್ಯಮಂತ್ರಿ ಯಾಗಿ ಮಧ್ಯಪ್ರದೇಶ ಕಾಂಗ್ರೆಸ್ ಸಮಿತಿಯ ವರಿಷ್ಠ ಕಮಲ್ ನಾಥ್ ಅವರನ್ನು ಗುರುವಾರ ಘೋಷಿಸಲಾಗಿತ್ತು.

 ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಮೂರು ಅವಧಿಯ ಬಿಜೆಪಿ ಸರಕಾರವನ್ನು ಅಧಿಕಾರದಿಂದ ಕೆಳಗಿಳಿಸಿದ ಬಳಿಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ನಡೆದಿತ್ತು. ಇದರಿಂದ ದೀರ್ಘ ವಿಳಂಬದ ಬಳಿಕ ಈ ಘೋಷಣೆ ಮಾಡಲಾಗಿದೆ.

 72 ವರ್ಷದ ಕಮಲ್ ನಾಥ್ ಅವರು ತನ್ನ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿ ಅಧಿಕಾರಕ್ಕೆ ಏರುತ್ತಿದ್ದಾರೆ. ಮಧ್ಯಪ್ರದೇಶದ ಛಿಂದ್ವಾರಾ ಕ್ಷೇತ್ರದಿಂದ 8 ಬಾರಿ ಸಂಸದರಾಗಿರುವ ಕಮಲ್ 16ನೇ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಕೂಡ ಕಾರ್ಯ ನಿರ್ವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News