ಮಣಿಪಾಲ: ಮನೆಗೆ ನುಗ್ಗಿ ಆಭರಣ ಕಳವು

Update: 2018-12-14 17:03 GMT

ಮಣಿಪಾಲ, ಡಿ.14: ಮನೆಗೆ ನುಗ್ಗಿದ ಕಳ್ಳರು ಸಾವಿರಾರು ರೂ. ಮೌಲ್ಯದ ಆಭರಣಗಳನ್ನು ಕಳವು ಮಾಡಿರುವ ಘಟನೆ ಡಿ.13ರಂದು ಬೆಳಗ್ಗೆ ಮಣಿಪಾಲ ದಲ್ಲಿ ನಡೆದಿದೆ.

ಗಾಯತ್ರಿ ಎಂಬವರ ಮನೆಯ ಬೀಗ ಮುರಿದು ಒಳನುಗ್ಗಿದ ಕಳ್ಳರು ಅಡುಗೆ ಕೋಣೆಯಲ್ಲಿ ಬ್ಯಾಗ್‌ನಲ್ಲಿಟ್ಟಿದ್ದ 20 ಸಾವಿರ ರೂ. ಮೌಲ್ಯದ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ಕಳವು ಮಾಡಿರುವುದಾಗಿ ದೂರಲಾಗಿದೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News