ಬೆಂಗಳೂರು: ರಸ್ತೆ ಅಪಘಾತಕ್ಕೆ ಯುವಕ ಬಲಿ

Update: 2018-12-14 17:20 GMT

ಬೆಂಗಳೂರು, ಡಿ.14: ದ್ವಿಚಕ್ರ ವಾಹನದಲ್ಲಿ ವೇಗವಾಗಿ ಹೋಗುತ್ತಿದ್ದ ವೇಳೆ ಯುವಕನೊಬ್ಬ ಆಯತಪ್ಪಿ ಕೆಳಕ್ಕೆ ಬಿದ್ದು ಮೃತಪಟ್ಟಿರುವ ಘಟನೆ ಅಟ್ಟೂರು ಲೇಔಟ್‌ನ ಮೇಜರ್ ಉನ್ನಿಕೃಷ್ಣನ್ ರಸ್ತೆಯಲ್ಲಿ ನಡೆದಿದೆ.

ಕೆಂಪೇಗೌಡ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿರುವ ಜೋಶ್ವಾ ಎಂಬುವವರು ಮೃತಪಟ್ಟಿದ್ದು, ಅವರು ಕೆಲಸ ಮುಗಿಸಿಕೊಂಡು ಮನೆಗೆ ವಾಪಾಸ್ಸಾಗುತ್ತಿದ್ದ ಸಂದರ್ಭದಲ್ಲಿ ದುರ್ಘಟನೆ ನಡೆದಿದೆ.

ಮೇಜರ್ ಉನ್ನಿಕೃಷ್ಣನ್ ರಸ್ತೆಯಲ್ಲಿ ವೇಗವಾಗಿ ಚಲಿಸುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮರಣ ಹೊಂದಿದ್ದಾರೆ. ಯಲಹಂಕ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಡಿಸಿಪಿ ಸಾರಾ ಫಾತಿಮಾ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News