ವಿಷಪೂರಿತ ಪ್ರಸಾದ ಸೇವಿಸಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆ: ಇಬ್ಬರ ಬಂಧನ

Update: 2018-12-15 15:51 GMT

ಬೆಂಗಳೂರು, ಡಿ. 15: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಕಿಚ್ಚುಗುತ್ತಿ ಮಾರಮ್ಮನ ದೇವಾಲಯದಲ್ಲಿ ಶುಕ್ರವಾರ ವಿಷಪೂರಿತ ಪ್ರಸಾದ ಸೇವನೆಯಿಂದ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಈ ದುರಂತಕ್ಕೆ ಸಂಬಂಧಿಸಿ ಇಬ್ಬರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ. ‘‘ಇದುವರೆಗೆ 13 ಮಂದಿ ಭಕ್ತರು ಮೃತಪಟ್ಟಿದ್ದಾರೆ. ಇಬ್ಬರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ. ಪ್ರಕರಣ ದಾಖಲಿಸಲಾಗಿದೆ’’ ಎಂದು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಟ್ವೀಟ್ ಮಾಡಿದ್ದಾರೆ. ವಿಷಪೂರಿತ ಆಹಾರ ಸೇವಿಸಿ ಅಸ್ವಸ್ಥಗೊಂಡಿರುವ 65 ಮಂದಿಯನ್ನು ಜಿಲ್ಲೆಯ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ. ಮೃತಪಟ್ಟವರ ಕುಟುಂಬಕ್ಕೆ ತಲಾ 1 ಲಕ್ಷ ರೂ. ಪರಿಹಾರ ಧನವನ್ನು ಪಕ್ಷದ ನಿಧಿಯಿಂದ ನೀಡಲಾಗುವುದು ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News