ಬೈಕ್ ಅಪಘಾತ: ಭಾಗವತ ಮಯ್ಯರಿಗೆ ಗಾಯ
Update: 2018-12-15 22:10 IST
ಉಡುಪಿ, ಡಿ.15: ಕಾರ್ಕಳದ ಸಾಲ್ಮರ ಎಂಬಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಾಲಿಗ್ರಾಮ ಮೇಳದ ಭಾಗವತ ರಾಘವೇಂದ್ರ ಮಯ್ಯ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಒಳರೋಗಿ ಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇವರು ಶುಕ್ರವಾರ ರಾತ್ರಿ ಧರ್ಮಸ್ಥಳದಲ್ಲಿ ಕಾಲಮಿತಿ ಯಕ್ಷಗಾನ ಮುಗಿಸಿ, ಬೆಳಗ್ಗೆ ನಿದ್ದೆ ಮಾಡಿ ಮಧ್ಯಾಹ್ನ ಕಾರ್ಕಳದಲ್ಲಿ ನಡೆಯುವ ಯಕ್ಷಗಾನಕ್ಕಾಗಿ ಬೈಕಿ ನಲ್ಲಿ ಹೊರಟಿದ್ದರು. ಈ ವೇಳೆ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದ ಪರಿಣಾಮ ರಾಘವೇಂದ್ರ ಮಯ್ಯ ಅವರ ತಲೆಗೆ ಗಾಯಗಳಾಗಿವೆ. ಕೂಡಲೇ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಣಾಪಾಯ ದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಅವರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುಳ್ಳು ಸುದ್ದಿಗಳ ಬಗ್ಗೆ ಮೇಳದ ಸಂಚಾಲಕ ಕಿಶನ್ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.