ಕಮಲನಾಥ್ ಪ್ರಮಾಣ ವಚನ ಸಮಾರಂಭಕ್ಕೆ ಮಮತಾ, ಮಾಯಾವತಿಗೆ ಆಹ್ವಾನ

Update: 2018-12-15 16:57 GMT

ಭೋಪಾಲ, ಡಿ.15: ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಕಮಲನಾಥ್ ಡಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ಕಾರ್ಯಕ್ರಮಕ್ಕೆ ಪ್ರಮುಖ ರಾಜಕೀಯ ಮುಖಂಡರಿಗೆ ಆಹ್ವಾನ ನೀಡಲಾಗಿದೆ.

ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಭೇಲ್ ನಗರದ ಜಂಬೂರಿ ಮೈದಾನದಲ್ಲಿ ನಡೆಯಲಿದ್ದು ಕಾರ್ಯಕ್ರಮಕ್ಕೆ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಲ್ಲದೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಬಿಎಸ್ಪಿ ಅಧ್ಯಕ್ಷೆ ಮಾಯಾವತಿ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್‌ರನ್ನು ಆಹ್ವಾನಿಸಲಾಗಿದೆ.

ಅಲ್ಲದೆ ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳನ್ನೂ ಆಹ್ವಾನಿಸಲಾಗಿದೆ. ಪ್ರಮುಖ ಉದ್ಯಮಿಗಳು, ಧಾರ್ಮಿಕ ಮುಖಂಡರೂ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News